ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 DECEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಬೈಕ್ ಶೋ ರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 20ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಆಗುಂಬೆ ರಸ್ತೆಯ ಕಂಡಿಲ್ ಮೋಟರ್ಸ್ ಟಿವಿಎಸ್ ಶೋ ರೂಂನಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುಮಾರು 20 ಬೈಕ್‌ಗಳಿಗೆ ಹಾನಿಯಾಗಿದೆ. ಒಂದೆರಡು ಬೈಕ್ ಸಂಪೂರ್ಣ ಸುಟ್ಟು ಹೋಗಿವೆ ಎಂದು ಹೇಳಲಾಗುತ್ತಿದೆ. ಪೀಠೋಪಕರಣ, ಕಂಪ್ಯೂಟರ್‌ಗಳಿಗು ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಭಾನುವಾರ ಅಗಿದ್ದರಿಂದ ಶೋ ರೂಂಗೆ ರಜೆ ಇತ್ತು. ಸಿಬ್ಬಂದಿ ಇರಲಿಲ್ಲ. ಹಾಗಾಗಿ ಬೆಂಕಿ ವ್ಯಾಪಕವಾಗಿ ಹರಡಿದ್ದು ಯಾರ ಗಮನಕ್ಕು ಬಂದಿರಲಿಲ್ಲ. ಹೊಗೆ ಕಾಣಿಸಿಕೊಂಡ ಹಿನ್ನೆಲೆ ಅಗ್ನಿಶಾಮಕ ಇಲಾಖೆಗೆ ಕರೆ ಮಾಡಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಹೊಸ ಸೇತುವೆ ಉದ್ಘಾಟನೆ, ವಾಹನ ಸಂಚಾರ ಶುರು, ಹೇಗಿದೆ ಸೇತುವೆ?