ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 07 JUNE 2021
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಶ್ರೀ ಮಹಾಂತ ಅಪ್ಪಗಳ ಕೃಪಾ ಪಾತ್ರರಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯಾರೆ ದಾಸೋಹ ಮಾಡಿ ಬಡಿಸುತ್ತಿದ್ದರು.
ಮುಖ್ಯಮಂತ್ರಿ ಸಂತಾಪ
ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಮಠದ ಅಭಿವೃದ್ಧಿ ಮತ್ತು ಕೆಳದಿ ಸಂಸ್ಥಾನದ ಇತಿಹಾಸದ ಬಗ್ಗೆ ಅಪಾರ ಕಾಳಜಿಹೊಂದಿ ಕ್ರಿಯಾಶೀಲರಾಗಿದ್ದರು. ಭಗವಂತನು ಶ್ರೀಗಳಿಗೆ ಸದ್ಗತಿಯನ್ನು ಕರುಣಿಸಲಿ ಹಾಗೂ ಶಿಷ್ಯವೃಂದಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]