![ಮತ್ತಿಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೇಸ್ 3 shivamogga live new logo formate](https://shivamoggalive.com/wp-content/uploads/2019/11/shivamogga-live-new-logo-formate.jpg)
ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020
ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಮಂಗನ ಕಾಯಿಲೆ ಪಾಸಿಟಿವ್ ಬಂದಿದೆ. ಇದರಿಂದ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ.
ಎಲ್ಲೆಲ್ಲಿ ಸೋಂಕು ಪತ್ತೆಯಾಗಿದೆ?
ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಕೆಎಫ್‍ಡಿ ಪಾಸಿಟಿವ್ ಬಂದಿದೆ. ಮತ್ತೊಂದೆಡೆ ಸಾಗರ ತಾಲೂಕು ಹೆನ್ನಿ ಗ್ರಾಮದ ಮಹಿಳೆಯೊಬ್ಬರಲ್ಲಿ ಕೆಎಫ್‍ಡಿ ಸೋಂಕು ಪತ್ತೆಯಾಗಿದೆ.
160ಕ್ಕೆ ಏರಿದ ಸೋಂಕಿತರ ಸಂಖ್ಯೆ
ಕೆಎಫ್‍ಡಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೆ ಇದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಸಾಗರದಲ್ಲಿ 35 ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ.
ಈ ವರ್ಷ ಕೆಎಫ್‍ಡಿಯಿಂದ ಐವರು ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಮೂವರು ಮತ್ತು ಸಾಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
![ಮತ್ತಿಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗ್ತಿದೆ ಕೇಸ್ 4 92107209 840687883077790 4340426127509028864 n.jpg? nc cat=103& nc sid=dd9801& nc ohc=nTffco3BFv0AX9cUOmv& nc ht=scontent.fblr11 1](https://scontent.fblr11-1.fna.fbcdn.net/v/t1.0-9/92107209_840687883077790_4340426127509028864_n.jpg?_nc_cat=103&_nc_sid=dd9801&_nc_ohc=nTffco3BFv0AX9cUOmv&_nc_ht=scontent.fblr11-1.fna&oh=a48f9e25aeed37179fed9bdda8dce8d5&oe=5EB1E531)
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]