ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | HOME MINISTER| 19 ಏಪ್ರಿಲ್ 2022
ಆರಗ ಜ್ಞಾನೇಂದ್ರ ಅವರು 7 ಕೋಟಿ ಜನರಿಗೆ ಗೃಹ ಸಚಿವ ಅನ್ನುವುದನ್ನು ಮರೆತಂತಿದೆ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಗೆ ಸೀಮಿತವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೇರ ಕಾರಣ. ಸೌಹಾರ್ದತೆ ಹಾಳಾಗಲು ನೇರ ಕಾರಣ ಅವರೆ. ಆದ್ದರಿಂದ ಆರಗ ಜ್ಞಾನೇಂದ್ರ ಅವರ ಮೇಲೆಯೆ ಪ್ರಕರಣ ದಾಖಲು ಮಾಡಬೇಕು ಎಂದರು.
ತನಿಖೆ ಸಿಬಿಐಗೆ ವಹಿಸಬೇಕು
ನಂದಿತಾ ಸಾವಿನ ಪ್ರಕರಣ, ಗೃಹ ಇಲಾಖೆ ನೇಮಕಾತಿ ವಿಚಾರದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತೀರ್ಥಹಳ್ಳಿ ಕ್ಷೇತ್ರದಲ್ಲಿ ಸೋಲಾರ್ ಅಳವಡಿಕೆ ಕಾಮಗಾರಿಯಲ್ಲಿ ಶೇ.60ರಷ್ಟು ಲಂಚ ಪಡೆಯಲಾಗಿದೆ. ಇವೆಲ್ಲದರ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಕಿಮ್ಮನೆ ರತ್ನಾಕರ್ ಒತ್ತಾಯಿಸಿದರು.
ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ ಪಾದಯಾತ್ರೆ
ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದು, ಇದಕ್ಕೂ ನಾಲ್ಕು ದಿನ ಮುಂಚಿತವಾಗಿ ಗುಡೇಕೊಪ್ಪ ಗ್ರಾಮ ಪಂಚಾಯಿತಿಯಿಂದ ಶಿವಮೊಗ್ಗದವರೆಗೆ ಸರ್ಕಾರ ಮತ್ತು ಗೃಹ ಸಚಿವರ ವೈಫಲ್ಯ ಖಂಡಿಸಿ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.
ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 200 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇರ ಹೊಣೆಗಾರರು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳಲು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ಕಾರಣ. ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ನೇರ ಹೊಣೆ ಎಂದು ದೂರಿದರು.
ಪಿ.ವಿ.ಮಹಾಬಲೇಶ್, ಡಿ.ಎಸ್.ವಿಶ್ವನಾಥ ಶೆಟ್ಟಿ, ಅಮರನಾಥ ಶೆಟ್ಟಿ, ವಿಲಿಯಂ ಮಾರ್ಟಿಸ್ ಇದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
HOME MINISTER
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422