SHIVAMOGGA LIVE NEWS | 5 ಏಪ್ರಿಲ್ 2022
ಆಮ್ ಆದ್ಮಿ ಪಕ್ಷ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೌನ ಮುರಿದಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಎಪಿ ಸೇರ್ಪಡೆ ವದಂತಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು?
‘ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಆಧಾರ ರಹಿತವಾದದ್ದು.’
‘ಯಾವುದೆ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರುವ ಅನಿವಾರ್ಯತೆಯು ನನಗಿಲ್ಲ. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ನಾನು 19 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಎರಡು ಭಾರಿ ಶಾಸಕನಾಗಿದ್ದೇನೆ.’
‘ರಾಜಕೀಯ ಅಲೆಮಾರಿಗಳು ಇಂತಹ ಸುದ್ದಿ ಹುಟ್ಟು ಹಾಕಿದ್ದಾರೆ. ನಾನು ಎಎಪಿ ಸೇರುವ ಸುದ್ದಿ ಸುಳ್ಳು.’
ಪ್ರಮುಖರಾದ ಕೆಸ್ತೂರು ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಂ, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಪಿ.ವಿ.ಮಹಾಬಲೇಶ್, ಡಿ.ಲಕ್ಷ್ಮಣ್, ಹಸಿರುಮನೆ ಮಹಾಬಲೇಶ್, ವಿಲಿಯಂ ಮಾರ್ಟಿಸ್ ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200