ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಡುವೆ ಮುನಿಸು ಹೊಸತೇನಲ್ಲ. ಈಗ ಇಬ್ಬರು ಒಂದೇ ಪಕ್ಷದಲ್ಲಿದ್ದಾರೆ. ಆರೋಪ, ಪ್ರತ್ಯಾರೋಪಗಳು ಮುಸುಕಿನ ಗುದ್ದಾಟವಾಗಿ ಮಾರ್ಪಾಡಾಗಿದೆ. ಕಿಮ್ಮನೆ ರತ್ನಾಕರ್ ಅವರ ಬಹಿರಂಗ ಪತ್ರ ಈ ಗುದ್ದಾಟದ ತೀವ್ರತೆಗೆ ಸಾಕ್ಷಿಯಾಗಿದೆ.
ವೈರಲ್ ಆಯ್ತು ಕಿಮ್ಮನೆ ಲೆಟರ್
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಹಿರಂಗ ಪತ್ರ ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಇದು ತೀರ್ಥಹಳ್ಳಿಯಲ್ಲಿ ವೈರಲ್ ಆಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಲೆನೋವು ತಂದೊಡ್ಡಿದೆ.
ಲೆಟರ್ ಬರೆಯೋಕೆ ಕಾರಣವೇನು?
ಮುಳುಗಡೆ ರೈತರು, ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಪಾದಯಾತ್ರೆ ಆಯೋಜಿಸಲಾಗಿದೆ. ಮಂಡಗದ್ದೆ ಹೋಬಳಿಯ ಕಲ್ಲುಕೊಪ್ಪದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆಯ ನಡೆಯಲಿದೆ. ಇದರ ಕರಪತ್ರಗಳಲ್ಲಿ ಕಾಂಗ್ರೆಸ್ ಮುಖಂಡರ ಭಾವಚಿತ್ರಗಳನ್ನು ಬಳಕೆ ಮಾಡಿಕೊಂಡು, ಪಕ್ಷದ ಚಿಹ್ನೆ ಇಲ್ಲದೆ ಖಾಸಗಿ ಕಾರ್ಯಕ್ರಮದಂತೆ ನಡೆಸಲಾಗುತ್ತಿದೆ. ಇದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಬಹಿರಂಗ ಪತ್ರ ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ಬಹಿರಂಗ ಪತ್ರದಲ್ಲಿ ಏನಿದೆ?
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬರೆದ ಪತ್ರದಲ್ಲಿ ಆರ್.ಎಂ.ಮಂಜುನಾಥಗೌಡ ಅವರ ವಿರುದ್ದ ಸಾಲು ಸಾಲು ಆರೋಪಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಂದ ಐದು ತಿಂಗಳಲ್ಲಿ, ಗುಂಪುಗಾರಿಕೆ ಮಾಡುತ್ತಿರುವುದು ಮತ್ತು ಖಾಸಗಿಯಾಗಿ ಸಭೆಗಳನ್ನು ಆಯೋಜಿಸುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹೀಗೆ ಮುಂದುವರೆದರೆ ಪಕ್ಷದಿಂದ ಹೊರಗೆ ಹಾಕುವ ಅನಿವಾರ್ಯತೆ ಕುರಿತು ಎಚ್ಚರಿಕೆ ನೀಡಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಬರೆದ ಎರಡು ಪುಟದ ಪತ್ರ ಇಲ್ಲಿದೆ.
ಜಿಲ್ಲಾ ಕಾಂಗ್ರೆಸ್’ನಲ್ಲಿ ತಳಮಳ
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಡುವಿನ ಮುಸುಕಿನ ಗುದ್ದಾಟ, ಜಿಲ್ಲಾ ಕಾಂಗ್ರೆಸ್’ಗೆ ನುಂಗಲಾರದ ತುತ್ತಾಗಿದೆ.
‘ಕಿಮ್ಮನೆ ರತ್ನಾಕರ್ ಅವರು ಮಾಜಿ ಸಚಿವರು ಮತ್ತು ಕೆಪಿಸಿಸಿಯ ವಕ್ತಾರರು. ಹಾಗಾಗಿ ಅದು ರಾಜ್ಯಮಟ್ಟದ ನಾಯಕರು ಮಾತನಾಡುತ್ತಾರೆ. ನಾಯಕರು ನಮ್ಮನ್ನು ಕೇಳಿದಾಗ ನಾವು ತಿಳಿಸುತ್ತೇವೆ. ಪಾದಯಾತ್ರೆಗೆ ನಮ್ಮನ್ನು ಕರೆದಿದ್ದಾರೆ. ಕಾಗೋಡು ತಿಮ್ಮಪ್ಪ ಅವರನ್ನೂ ಕರೆದಿದ್ದಾರೆ. ಕೆಲವು ಸಂಘಟನೆಗಳು ಇದನ್ನು ಮಾಡುತ್ತಿದ್ದು, ಆಹ್ವಾನದ ಮೇರೆಗೆ ನಾನು ಹೋಗುತ್ತಿದ್ದೇನೆ ಎಂದು ಮಂಜುನಾಥಗೌಡ ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಪಕ್ಷದ ಚಿಹ್ನೆ ಅಡಿ ಹೋರಾಟ ಮಾಡಬೇಕಿದೆ ಎಂದು ಕಿಮ್ಮನೆ ರತ್ನಾಕರ್ ಅವರು ಹೇಳಿದ್ದಾರೆ. ಇಬ್ಬರೊಂದಿಗೂ ಚರ್ಚಿಸುತ್ತೇನೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಇಬ್ಬರು ನಾಯಕರ ನಡುವಿನ ಮುಸುಕಿನ ಗುದ್ದಾಟ ತೀರ್ಥಹಳ್ಳಿ ಕಾಂಗ್ರೆಸ್ ಘಟಕದಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಚುನಾವಣೆಗಳ ಹೊಸ್ತಿಲಲ್ಲಿ ಈ ಗೊಂದಲ, ಕಾರ್ಯಕರ್ತರ ಉತ್ಸಾಹಕ್ಕೆ ತೊಡಕಾಗಬಹುದು ಎಂಬ ಆತಂಕವು ಎದುರಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200