ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019
ನೆರೆ ಪರಿಹಾರ ವಿತರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಳಂಬ ಧೋರಣೆ, ತೀರ್ಥಹಳ್ಳಿ ಶಾಸಕರ ವೈಫಲ್ಯ ಖಂಡಿಸಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸಿದರು. ಸುರಿವ ಮಳೆಯಲ್ಲು ಸುಮಾರು 15 ಕಿ.ಮೀ. ಪಾದಯಾತ್ರೆ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಆಗುಂಬೆಯ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಆರಂಭವಾಯಿತು. ಮಾಜಿ ಶಾಸಕ ಕಡಿದಾಳ್ ದಿವಾಕರ್ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಮೇಗರವಳ್ಳಿವರೆಗೆ ಪಾದಯಾತ್ರೆ ನಡೆಯಿತು. ದಾರಿ ಮಧ್ಯೆ ಭಾರಿ ಮಳೆಯಾಯಿತು. ಮಳೆಯನ್ನು ಲೆಕ್ಕಿಸಿದೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
ಮೇಗರವಳ್ಳಿಯ ಅರಣ್ಯ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆಗುಂಬೆ ಭಾಗದಲ್ಲಿ ಒಂಟಿ ಸಲಗದ ಹಾವಳಿ, ಮಂಗಗಳ ಕಾಟದಿಂದಾಗಿ ರೈತರು ಕಂಗಾಲಾಗಿದ್ದಾರೆ. ಬೆಳೆದ ಬೆಳೆಯಲ್ಲ ನಾಶವಾಗುತ್ತಿದೆ. ಕ್ಷೇತ್ರದಲ್ಲಿ ಹಲವು ಸಮಸ್ಯೆಗಳಿದ್ದರು ಶಾಸಕ ಆರಗ ಜ್ಞಾನೇಂದ್ರ ಅವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನೆರೆ ಪರಿಹಾರ ನೀಡುವ ಬದಲು ಬಿಜೆಪಿಯವರು ಗಾಂಧಿ ಯಾತ್ರೆ ಮಾಡುತ್ತಿದ್ದಾರೆ. ಅದರೆ ಬಿಜೆಪಿಯವರದ್ದು ಗಾಂಧಿ ಯಾತ್ರೆಯಲ್ಲ ಅದು ಕಪ್ಪೆ ಯಾತ್ರೆ ಎಂದು ಕಿಮ್ಮನೆ ರತ್ನಾಕರ್ ಲೇವಡಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಮುಡುಬಾ ರಾಘವೇಂದ್ರ, ಕೆಪಿಸಿಸಿ ಸದಸ್ಯ ಜಿ.ಎಸ್.ನಾರಾಯಣರಾವ್, ಪ್ರಮುಖರಾದ ಪಟ್ಟಮಕ್ಕಿ ಮಹಾಬಲೇಶ್, ಬಾಳೇಹಳ್ಳಿ ಪ್ರಭಾಕರ್, ಪದ್ಮನಾಭ, ಎಪಿಎಂಸಿ ಸದಸ್ಯರಾದ ಹಸಿರುಮನೆ ಮಹಾಬಲೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಕೆಳಕೆರೆ ಪ್ರದೀಪ್, ಧರಣೀಶ್, ಪಡುವಳ್ಳಿ ಹರ್ಷೇಂದ್ರಕುಮಾರ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]