ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಅಕ್ಟೋಬರ್ 2020
ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದು, ಯಾವುದೆ ಚರ್ಚೆ ಮಾಡದೆ ಹಲವು ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿರುವನ್ನು ಖಂಡಿಸಿ ಗಾಂಧಿ ಜಯಂತಿ ಅಂಗವಾಗಿ ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ನಡೆಸಿದರು.
ತಾಲೂಕು ಕಚೇರಿ ಮುಂದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಉಪವಾಸ ಆರಂಭಿಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನಡೆಯನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಹಲವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಬ್ಲಾಕ್ ಮತ್ತು ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಾದ ಕೆಸ್ತೂರ ಮಂಜುನಾಥ, ಮುಡುಬಾ ರಾಘವೇಂದ್ರ, ಕೆಪಿಸಿಸಿ ಸದಸ್ಯರಾದ ನಾರಾಯಣ ರಾವ್, ಜಿಲ್ಲಾ ಪಂಚಾಯತ್ ಸದಸ್ಯರಾದ ಭಾರತಿ ಬಾಳೆಹಳ್ಳಿ, ಕಲ್ಪನಾ ಪದ್ಮನಾಭ್, ಎಪಿಎಂಸಿ ಮಾಜಿ ಅಧ್ಯಕ್ಷ ಹಸಿರುಮನೆ ಮಹಾಬಲೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






