ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟೆಂಬರ್ 2021
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಚ್ಚರಿಸಿದ್ದಾರೆ.
ಅಕ್ಟೋಬರ್ 1ರ ಒಳಗೆ ಚುನಾವಣೆ ದಿನಾಂಕ ಘೋಷಿಸಬೇಕು. ಒಂದು ವೇಳೆ ಜಿಲ್ಲಾಧಿಕಾರಿ ಅವರು ವಿಳಂಬ ಮಾಡಿದರೆ, ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದಾರೆ.
ತೀರ್ಥಹಳ್ಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ಬಳಿಕ ಚುನಾವಣೆ ನಡೆಸುವಂತೆ ಸಿಎಂ ಸೂಚಿಸಿದ್ದರು. ಬಿಜೆಪಿಗೆ ಬಹುಮತ ಇಲ್ಲದೆ ಇರುವುದರಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಸಲು ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪವಿದೆ.
ಪಟ್ಟಣ ಪಂಚಾಯಿತ ಸದಸ್ಯರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಅಚ್ಚುಕಟ್ಟಾದ ಮನೆಗೆ ಅಚ್ಚುಕಟ್ಟಾದ ಪೀಠೋಪಕರಣ. ಶಿವಮೊಗ್ಗದಲ್ಲಿ @HOME ಶೋರೂಂ. ಒಮ್ಮೆ ಭೇಟಿ ಕೊಡಿ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





