ಕುಪ್ಪಳ್ಳಿ ಕವಿಮನೆಯಲ್ಲಿ ಕಳ್ಳತನ ಮಾಡಿದ್ದ ಅಪರಾಧಿಗಳಿಗೆ ಶಿಕ್ಷೆ, ಎಷ್ಟು ವರ್ಷ ಜೈಲು, ದಂಡದ ಮೊತ್ತ ಎಷ್ಟು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI | 30 ಜನವರಿ 2020

ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಕವಿಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳಿಗೆ ತೀರ್ಥಹಳ್ಳಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪದ್ಮವಿಭೂಷಣ ಪದಕ ಸೇರಿ ಇತರೆ ಅಮೂಲ್ಯ ವಸ್ತು ಕಳ್ಳತನವಾಗಿತ್ತು. ಈ ಪ್ರಕರಣದ ಅಪರಾಧಿಗಳಿಗೆ ಎರಡು ವರ್ಷ ಜೈಲು ಮತ್ತು 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

2019 readers copy new

ಪ್ರಕರಣದ ಮೊದಲ ಅಪರಾಧಿ ಮೃತಪಟ್ಟಿದ್ದಾನೆ. ದಾವಣಗೆರೆ ಜಿಲ್ಲೆ ತುರಚಘಟ್ಟದ ಬೆಳಂದೂರಿನ ರೇವಣಸಿದ್ದಪ್ಪ ವಿಚಾರಣಾ ಹಂತದಲ್ಲಿಯೇ ಮೃತನಾಗಿದ್ದಾನೆ. ಇನ್ನು, ರೇವಣಸಿದ್ದಪ್ಪಗೆ ಪದಕ ಕಳ್ಳತನಕ್ಕೆ ಪ್ರೇರೇಪಿಸಿದ ಕವಿಮನೆಯ ಮಾರ್ಗದರ್ಶಕ, ತೀರ್ಥಹಳ್ಳಿ ತಾಲೂಕು ಗಡಿಕಲ್ಲು ಗ್ರಾಮದ ಅಂಜನಪ್ಪ ಎರಡನೇ ಅಪರಾಧಿ. ಕಳ್ಳತನದ ಮಾಲೆಂದು ತಿಳಿದಿದ್ದರೂ ಅವುಗಳನ್ನು ಖರೀದಿಸಿದ್ದ ಸವಳಂಗದ ಪ್ರಕಾಶ್ ಮೂರನೇ ಅಪರಾಧಿಯಾಗಿದ್ದಾನೆ.

ಎರಡು ಮತ್ತು ಮೂರನೇ ಅಪರಾಧಿಗಳಿಗೆ ನ್ಯಾಯಾಲಯವು ತಲಾ 2 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಮತ್ತೆ ಆರು ತಿಂಗಳ ಸಜೆ ಅನುಭವಿಸುವಂತೆ ಆದೇಶಿಸಿದೆ.

2015ರ ನವೆಂಬರ್ 23ರಂದು ಕವಿಮನೆಗೆ ನುಗ್ಗಿ ಕುವೆಂಪು ಅವರಿಗೆ ಮೈಸೂರು ವಿಶ್ವವಿದ್ಯಾಲಯ ನೀಡಿದ್ದ 2 ಪದಕ, ಕೇಂದ್ರ ಸರ್ಕಾರ ಪ್ರದಾನ ಮಾಡಿದ್ದ ಪದ್ಮವಿಭೂಷಣ ಪದಕ, ಒಂದು ಸಾವಿರ ರೂ. ನಗದು ಕಳ್ಳತನವಾಗಿದೆ. ಈ ಕುರಿತು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಖಜಾಂಚಿ ಮನುದೇವ್ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅಂದಿನ ಪಿಎಸ್‌ಐ ಡಿ.ಆರ್. ಭರತ್‌ಕುಮಾರ್ ಹಾಗೂ ಪ್ರಭಾರ ಸಿಪಿಐ ಎಚ್.ಎಂ. ಮಂಜುನಾಥ್ ತಂಡ ಆರೋಪಿಗಳನ್ನು ಬಂಧಿಸಿದ್ದರು.

ಕಳ್ಳತನ ಮಾಡಿದ್ದ ಎಲ್ಲ ವಸ್ತುಗಳನ್ನು ವಶಕ್ಕೆ ಪಡೆಯಲಾಯಿತು. ಆದರೆ ಪದ್ಮವಿಭೂಷಣ ಪದಕ ಮಾತ್ರ ಪತ್ತೆಯಾಗಿಲ್ಲ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಡಿ.ಬಿನು ಅವರು ವಾದ ಮಂಡಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment