ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JULY 2024
THIRTHAHALLI : ಧರೆ ಕುಸಿದು ಬೈಪಾಸ್ ರಸ್ತೆ (Bypass Road) ಮೇಲೆ ಮಣ್ಣು ಬಿದ್ದಿದ್ದರಿಂದ ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ವಿಚಾರ ತಿಳಿದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸಿದರು. ಇನ್ನು, ತೀರ್ಥಹಳ್ಳಿಯಲ್ಲಿ ಮಳೆ ಮುಂದುವರೆದಿದ್ದು, ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಹಾಗಾಗಿ ಸದ್ಯ ಈ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

2023ರಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬದಲಿ ಸೇತುವೆ ಮಾರ್ಗ ಇದಾಗಿದೆ. ಸದ್ಯ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿರುವುದರಿಂದ ಕುರುವಳ್ಳಿ ಮತ್ತು ಬಾಳೆಬೈಲು ನಡುವೆ ಸಂಚರಿಸುವ ವಾಹನಗಳು ತೀರ್ಥಹಳ್ಳಿ ಪಟ್ಟಣದ ಮೂಲಕ ಸಂಚರಿಸಬೇಕಿದೆ.

ಇದನ್ನೂ ಓದಿ ⇓
ಬ್ಯಾಂಕಿಂಗ್ ಪರೀಕ್ಷೆ, ಶಿವಮೊಗ್ಗದಲ್ಲಿ ಒಂದು ದಿನದ ಕಾರ್ಯಾಗಾರ, ಹೆಸರು ನೋಂದಾಯಿಸಲು ಅವಕಾಶ, ಇಲ್ಲಿದೆ ಮಾಹಿತಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






