ಆಗುಂಬೆಯಲ್ಲಿ ಗುಡ್ಡ ಕುಸಿತ, ಘಾಟಿಯಲ್ಲಿ ವಾಹನ ಸಂಚಾರ ಬಂದ್

SHIVAMOGGA LIVE | THIRTHAHALLI | 10 JULY 2022

ನಿರಂತರ ಮಳೆಗೆ ಆಗುಂಬೆಯಲ್ಲಿ (AGUMBE) ಗುಡ್ಡ ಕುಸಿತ LAND SLIDE) ಉಂಟಾಗಿದೆ. ಆದ್ದರಿಂದ ಘಾಟಿಯಲ್ಲಿ (GHAT) ವಾಹನ ಸಂಚಾರ ಬಂದ್ ಆಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

kannada banner%20(1)

ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಗಡಿಗೆ ಹೊಂದಿಕೊಂಡಂತೆ ಇರುವ ತಿರುವಿನಲ್ಲಿ ಘಟನೆ ಸಂಭವಿಸಿದೆ.

ರಸ್ತೆ ಮೇಲೆ ಮಣ್ಣು, ಮರ

ಗುಡ್ಡ ಕುಸಿದು ಘಾಟಿಯ ರಸ್ತೆ ಮೇಲೆ ಮಣ್ಣು ಬಂದು ಬಿದ್ದಿದೆ. ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿದೆ. ಹಾಗಾಗಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.

Kalleshwara-Enterprises.webp

ಆಗುಂಬೆಯಲ್ಲಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್‌ (CHECK POST) ಬಳಿ ವಾಹನಗಳನ್ನು ತಡೆದು ಹಿಂದಕ್ಕೆ ಕಳುಹಿಸಲಾಗುತ್ತಿದೆ. ಇತ್ತ, ಘಾಟಿ ಕೆಳಗೆ ಸೋಮೇಶ್ವರ (SOMESHWARA) ಚೆಕ್‌ ಪೋಸ್ಟ್‌ನಲ್ಲೂ ವಾಹನಗಳನ್ನು ತಡೆದು ಮರಳಿ ಕಳುಹಿಸಲಾಗುತ್ತಿದೆ.

ಕಾರ್ಯಾಚರಣೆ ಆರಂಭ

ಘಾಟಿಯಲ್ಲಿ ರಸ್ತೆ ಮೇಲೆ ಬಿದ್ದಿರುವ ಮಣ್ಣು, ಮರ ತೆರವು ಕಾರ್ಯಾಚರಣೆ ಆರಂಭವಾಗಿದೆ. ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯ ನಡೆಸಲಾಗುತ್ತಿದೆ. ಬಹು ಹೊತ್ತು ಕಾರ್ಯಾಚರಣೆ ನಡೆಯುವ ಸಂಭವವಿದೆ.

ಗೃಹ ಸಚಿವರ ಭೇಟಿ

ಗುಡ್ಡ ಕುಸಿತದ ವಿಚಾರ ತಿಳಿಯುತ್ತಿದ್ದಂತೆ ಗೃಹ ಸಚಿವ (HOME MINISTER) ಆರಗ ಜ್ಞಾನೇಂದ್ರ ಅವರು ಆಗುಂಬೆಗೆ ಭೇಟಿ ನೀಡಿದ್ದರು. ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ತೆರಳಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ಸದ್ಯ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿವೆ.

ಇದನ್ನೂ ಓದಿ –  ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಸಂಚಾರಕ್ಕಿಲ್ಲ ಸಮಸ್ಯೆ

ADVERTISEMENT

100722 landslide at agumbe ghat in thirthahalli

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment