ತೀರ್ಥಹಳ್ಳಿ ಬೈಪಾಸ್‌ನಲ್ಲಿ ಮತ್ತೊಂದು ಕಡೆ ಭೂ ಕುಸಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

THIRTHAHALLI : ಕುರುವಳ್ಳಿ – ಬಾಳೆಬೈಲು ಬೈಪಾಸ್‌ ರಸ್ತೆಯ (Bypass Road) ಮತ್ತೊಂದು ಬದಿಯಲ್ಲಿ ಭೂಕುಸಿತ ಉಂಟಾಗಿದೆ. ಭಾರಿ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದಿದೆ. ಗುಡ್ಡದ ಮೇಲಿದ್ದ ಮಾವಿನ ಮರ ಉರುಳಿ ಬಿದ್ದಿದೆ.

ಇದೇ ಬೈಪಾಸ್‌ನಲ್ಲಿ ಸೋಮವಾರ ಭೂಕುಸಿತ ಉಂಟಾಗಿತ್ತು. ಮಂಗಳವಾರ ಹೆದ್ದಾರಿಯ ತಡೆಗೋಡೆ ಕುಸಿದಿತ್ತು. ಮಣ್ಣು ಪೂರ್ತಿಯಾಗಿ ಬೈಪಾಸ್‌ ರಸ್ತೆಗೆ ಬಂದಿತ್ತು. ಈ ಮೊದಲು ಭೂ ಕುಸಿತ ಸಂಭವಿಸಿದ ಸ್ಥಳದ ಎದುರು ಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕಾಮಗಾರಿ ಕುರಿತು ಪ್ರಶ್ನೆ ಏಳುವಂತೆ ಮಾಡಿದೆ.

Thirthahalli-Bypass-road-second-landslide

ಮಂಗಳವಾರ ಬೆಳಗಿನ ಜಾವ ಎರಡನೇ ಬಾರಿ ಭೂ ಕುಸಿತ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೆ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಇದನ್ನೂ ಓದಿ ⇓

ಆಗುಂಬೆ, ಮೇಗರವಳ್ಳಿಯಲ್ಲಿ ಭಾರಿ ಮಳೆ, ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2024

Leave a Comment