ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತರು ದಿಢೀರ್‌ ಭೇಟಿ, ಪರಿಶೀಲನೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ತೀರ್ಥಹಳ್ಳಿ: ದುರಾಡಳಿತ, ಅವ್ಯವಹಾರಗಳ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು.

ನಿವೇಶನ ಇ–ಸ್ವತ್ತು ನೋಂದಣಿಯಲ್ಲಿ ಅಕ್ರಮ, ಅವ್ಯವಹಾರ, ಸಾರ್ವಜನಿಕರ ಅರ್ಜಿ ವಿಲೇವಾರಿ ವಿಳಂಬ, ಸರ್ಕಾರಿ ಸೌಕರ್ಯ ವಿತರಣೆಯಲ್ಲಿ ಲೋಪ, ದುರಾಡಳಿತ ಕುರಿತಂತೆ ಆರೋಪಗಳು ಕೇಳಿ ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು‌ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ » ತೀರ್ಥಹಳ್ಳಿ ಮುಖ್ಯರಸ್ತೆಯಲ್ಲೇ ಬಸ್‌ ಬ್ರೇಕ್ ಫೇಲ್‌, ಬೈಕುಗಳು ಜಖಂ

ಕಾಮಗಾರಿ, ಆರೋಗ್ಯ, ಕಂದಾಯ, ಇ–ನೋಂದಣಿ, ಲೆಕ್ಕ, ಆಡಳಿತ ಶಾಖೆಗಳಲ್ಲಿ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್, 8 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮುಖ್ಯಾಧಿಕಾರಿ ಡಿ.ನಾಗರಾಜ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ » ರಾಜ್ಯಕ್ಕೆ ಮತ್ತೆ ಮಳೆ ಮುನ್ಸೂಚನೆ, ಶಿವಮೊಗ್ಗದಲ್ಲಿ ಹೇಗಿರುತ್ತೆ ವಾತಾವರಣ? ಇವತ್ತಿನ ಹವಾಮಾನ ವರದಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment