ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 08 ಏಪ್ರಿಲ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ
ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ.
ಕೂಡಲೆ ಕರೆ ಮಾಡಿ 9972194422
ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಮದನ್, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ವಾರವಷ್ಟೇ ಮದನ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಮದನ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ತಾಲೂಕು ಅಧ್ಯಕ್ಷ ಮೋಹನ್ ಶೆಟ್ಟಿ, ಮದನ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಚುನಾವಣೆ ಹೊಸ್ತಿಲಲ್ಲಿ ಮಹತ್ವದ ಬೆಳವಣಿಗೆ
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿದ್ದ ಮದನ್, ದೀಢರ್ ಬೆಳವಣಿಗೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಸರ್ವಾಧಿಕಾರಿ ಧೋರಣೆಯಿಂದಾಗಿ ಪಕ್ಷ ತೊರೆಯುತ್ತಿರುವುದಾಗಿ ಮದನ್ ಸ್ಪಷ್ಟಪಡಿಸಿದ್ದರು.
ಚುನಾವಣೆ ಹೊಸ್ತಿಲಲ್ಲಿ ನಡೆದ ಬೆಳವಣಿಗೆಯಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಅಭಿಪ್ರಾಯ ಮೂಡಿದೆ. ಆದರೆ ಮದನ್ ಕಾಂಗ್ರೆಸ್ ಸೇರಬಹುದು ಅಂತಾ ಹೇಳಲಾಗುತ್ತಿತ್ತು. ಇದರಿಂದ ಮೈತ್ರಿ ಅಭ್ಯರ್ಥಿಗೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಿತ್ತು. ಆದರೆ ಈಗ ಮದನ್, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.
ಮದನ್ ಸೇರ್ಪಡೆಗೆ ಬಿಜೆಪಿಯಲ್ಲೂ ಆಕ್ರೋಶ
ಇನ್ನು, ಮದನ್ ಈ ಮೊದಲು ಬಿಜೆಪಿಯಲ್ಲಿಯೇ ಇದ್ದರು. ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಆಪ್ತರು. 2010ರಲ್ಲಿ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಈಗ ಪುನಃ ಬಿಜೆಪಿಗೆ ಮರಳಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಅಸಮಾಧನ ಮೂಡಿಸಿದೆ. ಕೆಲವು ಕಾರ್ಯಕರ್ತರು, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
ಮದನ್ ಸೇರ್ಪಡೆಯ ಬೆನ್ನಿಗೆ ಅವರ ಬೆಂಬಲಿಗರು ಸದ್ಯದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿಗೆ ಇದು ಲಾಭ ತಂದುಕೊಡುವ ಸಾಧ್ಯತೆ ಇದೆ. ಆ ಬಳಿಕ ನಡೆಯುವ ಬೆಳವಣಿಗೆಗಳು ತೀರ್ಥಹಳ್ಳಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
- ಭಾರಿ ಮಳೆಗೆ ಬೆಳೆ ಹಾನಿ, ಶಾಸಕ ವಿಜಯೇಂದ್ರ ಭೇಟಿ
- ಅಡಿಕೆ ಧಾರಣೆ | 30 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಬಸ್ ಹತ್ತಿ ತಾಯಿಯತ್ತ ತಿರುಗಿದ ಮಗಳಿಗೆ ಕಾದಿತ್ತು ಶಾಕ್
- ಸಾಗರದ ಸಿರಿವಂತೆ ಚಂದ್ರಶೇಖರ್ಗೆ ರಾಜ್ಯೋತ್ಸವ ಪ್ರಶಸ್ತಿ
- ಶಿವಮೊಗ್ಗ ಸಿಟಿಯ ವಿವಿಧೆಡೆ ಮತ್ತೆ ಮಳೆ ಅಬ್ಬರ
- ಚಂದ್ರಗುತ್ತಿಯಲ್ಲಿ 8 ವರ್ಷದ ಬಳಿಕ ಆಭರಣ ಎಣಿಕೆ, ಕೆ.ಜಿಗಟ್ಟಲೆ ಚಿನ್ನ, ಬೆಳ್ಳಿ ಸಂಗ್ರಹ