NEWS HIGHLIGHTS
ತೀರ್ಥಹಳ್ಳಿ: ತಾಲ್ಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಳೂರು ಗ್ರಾಮದ ಸಮೀಪ ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿರುವ ಮಾಲತಿ ನದಿಯಲ್ಲಿ ವೃದ್ಧರೊಬ್ಬರು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಕೇಳೂರು ಗ್ರಾಮದ ನಿವಾಸಿ ರಾಮಪ್ಪ (65) ಭಾನುವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಇವರ ಚಪ್ಪಲಿ, ಬಟ್ಟೆ ಹಾಗೂ ರೈನ್‌ಕೋಟ್ ನದಿ ದಡದಲ್ಲಿ ಪತ್ತೆಯಾಗಿವೆ. ಇವರು ನದಿ ನೀರಿನಲ್ಲಿ ಕೊಚ್ಚಿಹೋಗಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ. ರಾಮಪ್ಪ ಅವರ ಪತ್ತೆಗಾಗಿ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ನದಿ ಪಾತ್ರದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು