ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2023
THIRTHAHALLI : ಮರಳು ಕ್ವಾರೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಣೆ (sand mining) ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿ ಆರೋಪಿಸಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.
ಆಂದಿನಿ ಮರಳು ಕ್ವಾರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಣೆ ಮಾಡಲಾಗುತ್ತಿದೆ. ನಿಯಮಾನುಸಾರ ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ. ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿ, ಆಯುಕ್ತರು, ಜಂಟಿ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರಮುಖರಾದ ಸಂದೀಪ್ ಗಾರ್ಡರಗದ್ದೆ, ಸಂತೋಷ್ ಗಾರ್ಡರಗದ್ದೆ, ಸತೀಶ್ ಶೆಟ್ಟಿ, ಮಂಜುನಾಥ, ಕೃಷ್ಣಪ್ಪ ಕೆರೋಡಿ, ಗಣೇಶ್, ಸಂತೋಷ್, ಕಾರ್ತಿಕ್ ಗಾರ್ಡರಗದ್ದೆ, ರಾಜೇಶ್ ಇದ್ದರು.
ಇದನ್ನೂ ಓದಿ – ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422