ಬೆಜ್ಜವಳ್ಳಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ, ಯಾವಾಗ? ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಆಗಸ್ಟ್‌ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

BEJJAVALLI THIRTHAHALLI NEWS 1

ಸಭೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸ್ಥಳದಲ್ಲೇ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಳ್ಳಬಹುದು. ತಮ್ಮ ವಿದ್ಯುತ್ ಬಿಲ್, ಮೀಟರ್ ಸಮಸ್ಯೆ ಅಥವಾ ಇನ್ನಿತರೆ ತಾಂತ್ರಿಕ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ