ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JANUARY 2021
ಅಕಾಲಿಕ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಂತಹ ರೈತರಿಗೆ ಶೀಘ್ರದಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅಕಾಲಿಕ ಮಳೆಯಿಂದ ಅಪಾರ ಹಾನಿ ಸಂಭಿಸಿದೆ. ಹಾನಿಗೊಳಗಾದ ರೈತರ ಜಮೀನಿನ ಕರಿತು ಮಾಹಿತಿ ಪಡೆದು, ಕೂಲಂಕಷ ತನಿಖೆ ನಡೆಸಿ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ವಿಮೆ ಪಡೆಯಲು ಹಿಂದೇಟು
ಶಿವಮೊಗ್ಗ ಜಿಲ್ಲೆಯ ಹಲವು ರೈತರು ಬೆಳೆ ವಿಮೆ ಪಡೆಯುವಲ್ಲಿ ಹಿಂದೆ ಬಿದಿದ್ದಾರೆ. ಶಿಕಾರಿಪುರ, ಸೊರಬದ ರೈತರು ಬೆಳೆ ವಿಮೆ ಪಡೆಯುವಲ್ಲಿ ಮುಂದಿದ್ದಾರೆ. ಆದರೆ ತೀರ್ಥಹಳ್ಳಿ ಸಾಗರ, ಹೊಸನಗರ, ಭದ್ರಾವತಿಯ ರೈತರು ವಿಮೆ ಪಡೆಯುವಲ್ಲಿ ಹಿಂದಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಹಿರೇಕೆರೂರಿನಿಂದ ಕಾರ್ಕಳಕ್ಕೆ ತೆರಳುವ ಮಾರ್ಗ ಮಧ್ಯೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಸಚಿವ ಬಿ.ಸಿ.ಪಾಟೀಲ್, ತುಂಗಾ ನದಿಯ ಕಮಾನು ಸೇತುವೆಯನ್ನು ವೀಕ್ಷಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್, ಉಪ ನಿರ್ದೇಶಕ ಬಸವರಾಜು, ಕೃಷಿ ಇಲಾಖೆ ಅಧಿಕಾರಿಗಳು, ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422