ತೀರ್ಥಹಳ್ಳಿ: ಇಲ್ಲಿನ ಗಾಂಧಿ ನಗರದಲ್ಲಿ ಕಳೆದ ಗುಡ್ಡ ಕುಸಿತು ಮೂವರು ಸಾವನ್ನಪ್ಪದ್ದ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಘಟನೆ ಕುರಿತು ಸ್ಥಳೀಯರು, ಪ್ರತ್ಯಕ್ಷದರ್ಶಿಗಳು, ಜನಪ್ರತಿನಿಧಿಗಳ ಜೊತೆಗೆ ಚರ್ಚೆ ನಡೆಸಿದರು.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಮಿನಿಸ್ಟರ್ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್

ಗುಡ್ಡ ಕುಸಿತದಿಂದ ಮೂವರು ಸಾವನ್ನಪ್ಪಿದಾರೆ. ಇನ್ನು ಘಟನೆಯಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ಹೆಚ್ಚಿನ ಪರಿಹಾರ ದೊರಕಿಸಿಕೊಡಲು ಪ್ರಯತ್ತಿಸಲಾಗುತ್ತದೆ. ಸಂತ್ರಸ್ತರಿಗೆ ವೈಯಕ್ತಿಕವಾಗಿ ₹1 ಲಕ್ಷ ನೀಡುತ್ತೇನೆ. ಸ್ಥಳೀಯ ಯುವಕರು ₹5 ಲಕ್ಷ ಸಂಗ್ರಹಿಸಿ ಸಹಾಯ ಮಾಡಲು ಮುಂದಾಗಿದ್ದಾರೆ.


ಈ ಅಪಾಯಕಾರಿ ಜಾಗದಲ್ಲಿ ವಾಸಿಸಲು ಸಾಧ್ಯವಿಲ್ಲ. ಇಲ್ಲಿದ್ದವರನ್ನ ಬೇರೆಡೆಗೆ ಸ್ಥಳಾಂತರ ಮಾಡಲು ಈಗಾಗಲೇ ನೋಟಿಸ್ ಕೂಡ ನೀಡಲಾಗಿದೆ. ಆದ್ದರಿಂದ ಹಾನಿಗೀಡಾದ ಮನೆಗಳಲ್ಲಿ ಇರುವವರನ್ನು ಬೇರೆಡೆ ಸುರಕ್ಷಿತ ನಿವೇಶನ ನೀಡಿ ಮನೆ ಕಟ್ಟಿಕೊಳ್ಳಲು ನೆರವು ನೀಡಲಾಗುತ್ತದೆ.

ಕೂಲಿಗಾಗಿ ಬೇರೆ ಜಿಲ್ಲೆಗಳಿಂದ ಬಂದಿದ್ದಾರೆ. ಅವರು ಸದ್ಯಕ್ಕೆ ಸುರಕ್ಷಿತವಾಗಿ ವಾಸಿಸಲು ಅನುಕೂಲವಾಗುವಂತೆ ಬಾಡಿಗೆ ಮನೆಯ ವ್ಯವಸ್ಥೆ ಮಾಡಿ, ಅದಕ್ಕೆ ತಗಲುವ ಬಾಡಿಗೆ ಹಣವನ್ನು ಭರಿಸುವ ಪ್ರಯತ್ನ ಮಾಡಲಾಗುತ್ತದೆ.
ಈ ಸಂದರ್ಭ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಸ್ಥಳೀಯ ಮುಖಂಡರು, ಸ್ಥಳೀಯರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.