ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RAINFALL NEWS : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗಿದೆ. ಆದರೆ ಕಳೆದ ವಾರ ಸುರಿದ ಮಳೆಗೆ ಜಿಲ್ಲೆಯ ವಿವಿಧೆಡೆ ಆಸ್ತಿಪಾಸ್ತಿ, ಬೆಳೆ ಹಾನಿಯಾಗಿದೆ (Rain Effect). ಕಳೆದ ಎರಡು ದಿನದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಸಚಿವರು ಎಲ್ಲೆಲ್ಲಿ ಪರಿಶೀಲನೆ ನಡೆಸಿದರು?
ಸೊರಬದಲ್ಲಿ ಸಚಿವ ಮಧು ಪರಿಶೀಲನೆ ಸೊರಬ ಸುದ್ದಿ : ತಾಲೂಕಿನಲ್ಲಿ ವರದಾ ಮತ್ತು ದಂಡಾವತಿ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಕಡಸೂರು, ಹೊಳೆ ಜೋಳದಗುಡ್ಡೆ, ಬಂಕಸಾಣ ಗ್ರಾಮದ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು.
ಮಳೆಗಾಲ ಇನ್ನೂ ಮುಂದುವರೆಯಲಿದ್ದು, ಒಂದು ತಿಂಗಳ ನಂತರ ಮಳೆಯಿಂದ ಆಗಿರುವ ಹಾನಿಯನ್ನು ಕ್ರೋಢಿಕರಿಸಿ ಎಲ್ಲಾ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಿ ವರದಿ ಪಡೆದು ನಿಗದಿತ ಸಮಯದಲ್ಲಿ ಪರಿಹಾರ ಒದಗಿಸಲಾಗುತ್ತದೆ. ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ 5 ಭಾಗಗಳಲ್ಲಿ ಬ್ಯಾರೇಜ್ ನಿರ್ಮಾಣಕ್ಕೆ 53 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಟೆಂಡರ್ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು. ಈ ಯೋಜನೆಯನ್ನು ದಂಡಾವತಿ ನದಿಗೆ ಅಡ್ಡಲಾಗಿ ವಿಸ್ತರಿಸಲಾಗುವುದು. – ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಇಡೀ ದಿನ ಮೂರು ತಾಲೂಕಿನಲ್ಲಿ ಪರಿಶೀಲನೆ
ಭಾನುವಾರ ಇಡೀ ದಿನ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಚಿವ ಮಧು ಬಂಗಾರಪ್ಪ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಹಿರೇನಲ್ಲೂರು, ಕಾನಲೆ, ಸೈದೂರು, ಮಾವಿನಹೊಳೆ ಸೇರಿದಂತೆ ಹಲವು ಕಡೆ ಭೇಟಿ ನೀಡಿ ಪರಿಶೀಲಿಸಿದರು. ಹೊಸನಗರ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.
ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.