ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 NOVEMBER 2023
THIRTHAHALLI : ಖಾಸಗಿ ಬಸ್ ಮತ್ತು ಫಾರ್ಚುನರ್ ಕಾರು ಮುಖಾಮುಖಿ ಡಿಕ್ಕಿ ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ಬಳಗಟ್ಟೆಯ ಪೂರ್ಣೇಶ್ (42) ಮೃತ ದುರ್ದೈವಿ.
ಪೂರ್ಣೇಶ್ ಅವರಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆಗೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ವಿವಿಧ ಆಸ್ಪತ್ರೆಗೆ ಶಿಫ್ಟ್
ಬಳಗಟ್ಟೆ ಶಾಂತಪ್ಪ ಎಂಬುವವರ ಕುಟುಂಬ ಫಾರ್ಚುನರ್ ಕಾರಿನಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಕಾರು ನಜ್ಜುಗುಜ್ಜಾಗಿದ್ದು ಶಾಂತಪ್ಪ ಅವರ ಕುಟುಂಬದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ, ಮತ್ತಿಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸಿನಲ್ಲಿದ್ದವರಿಗು ಗಾಯ
ಇನ್ನು, ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗು ಗಾಯವಾಗಿದೆ. ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಆರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ – ಅಡಿಕೆ ಕಳ್ಳರು ಅರೆಸ್ಟ್, ಪತ್ತೆಯಾಯ್ತು 300 ರಬ್ಬರ್ ಶೀಟ್, ಏನಿದು ಕೇಸ್? ಯಾರಿದು ಆರೋಪಿಗಳು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422