ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JUNE 2024
THIRTHAHALLI : ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ತಹಶೀಲ್ದಾರ್ ಕೊಠಡಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಆಡಳಿತ ಸುಧಾರಣೆ ಮಾಡ್ತೀರೋ ಇಲ್ಲವೋ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರಗ ಆಕ್ರೋಶಕ್ಕೆ ಕಾರಣವೇನು?
‘ಇಂಗ್ಲಿಷ್ ಭಾಷೆಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ದಲಿತ ಮಹಿಳೆಯೊಬ್ಬರು 4 ತಿಂಗಳಿನಿಂದ ಕಚೇರಿಗೆ ಬರುತ್ತಿದ್ದಾರೆ. ಇನ್ನೂ ಪ್ರಮಾಣ ಪತ್ರ ಸಿಕ್ಕಿಲ್ಲ. ಕಚೇರಿ ಸಿಬ್ಬಂದಿ ಮಹಿಳೆಗೆ ನೀನು ದಿನಾ ಬಂದು ಕಿರಿಕಿರಿ ಮಾಡ್ತೀಯ. ಸುಮ್ಮನೆ ವಾಪಸ್ ಹೋಗು ಎಂದು ಗದರಿಸುತ್ತಾರೆ. ಮಧ್ಯವರ್ತಿಗಳ ಕೆಲಸ ಸಲೀಸಾಗಿ ಆಗುತ್ತಿದೆ. ಜನರ ಕೆಲಸ ಆಗುತ್ತಿಲ್ಲ. ಸರ್ಕಾರ ಸಂಬಳ ಕೊಡಲ್ವಾ? ನಿಮ್ಮ ಕೆಟ್ಟ ಕೆಲಸದಿಂದ ಜನರ ಬಳಿ ನಾನು ಮಾತು ಕೇಳುವಂತಾಗಿದೆ’ ಎಂದು ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿಂದ ಎದ್ದು ಹೋಗುವುದಿಲ್ಲ
ತಾಲೂಕ ಕಚೇರಿಯ ಕೆಲವು ಸಿಬ್ಬಂದಿಯಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಆಗುತ್ತಿದೆ. ಕ್ರಮ ಕೈಗೊಳ್ಳದಿದ್ದರೆ ಇಲ್ಲಿಂದ ಎದ್ದು ಹೋಗಲ್ಲ ಎಂದು ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಚೇರು ಹಾಕಿ ಕುಳಿತು ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಸಿಬ್ಬಂದಿಯ ವರ್ತನೆ ಸರಿಪಡಿಸುವಂತೆ ಆಗ್ರಹಿಸಿದರು.
ಸಮಾಧಾನಪಡಿಸಿದ ಜಿಲ್ಲಾಧಿಕಾರಿ
ಫೋನ್ ಮೂಲಕ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಸಮಾಧಾನಪಡಿಸಿದ ಜಿಲ್ಲಾಧಿಕಾರಿ, ಸಂಜೆಯೊಳಗೆ ಇಂಗ್ಲೀಷ್ ಭಾಷೆಯಲ್ಲಿ ಜಾತಿ ಪ್ರಮಾಣಪತ್ರ ನೀಡಲಾಗುತ್ತದೆ. ಕಚೇರಿ ಸಿಬ್ಬಂದಿ ವರ್ತನೆ ಕುರಿತು ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಕಚೇರಿ ಬಾಗಿಲಲ್ಲಿ ನೀವು ಕುಳಿತರೆ ಕಂದಾಯ ಇಲಾಖೆ ಆಡಳಿತಕ್ಕೆ ಮುಜುಗರ ಆಗಲಿದೆ ಎಂದರು. ಇದರಿಂದ ಸಮಾಧಾನಗೊಂಡ ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ ಕೈ ಬಿಟ್ಟರು.
ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ
ಬಳಿಕ ಸಬ್ ರಿಜಿಸ್ಟ್ರಾರ್ ಕಚೇರಿ, ಕಸಬಾ ನಾಡಕಚೇರಿಗೂ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರ ಕೆಲಸಗಳು ಶೀಘ್ರ ಮುಗಿಯಬೇಕು. ಕಿರಿಕಿರಿ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಸೊಪ್ಪುಗುಡ್ಡ ರಾಘವೇಂದ್ರ, ತಳಲೆ ಪ್ರಸಾದ್ ಇದ್ದರು.
ಇದನ್ನೂ ಓದಿ – ತೆಪ್ಪ ಮುಳುಗಿ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಮೂವರು ಯುವಕರು ನಾಪತ್ತೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422