ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 JULY 2023
THIRTHAHALLI : ಮಾಜಿ ಸಚಿವ ಆರಗ ಜ್ಞಾನೇಂದ್ರ ಇವತ್ತು ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಕುರ್ಚಿಗಳು ಖಾಲಿ ಇದ್ದಿದ್ದನ್ನು ಕಂಡು ಆಕ್ರೋಶಗೊಂಡರು.
.jpeg)
ಸಂಜೆ 4.30ರ ಹೊತ್ತಿಗೆ ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್ ಭೇಟಿ ನೀಡಿದ್ದರು. ಈ ವೇಳೆ ವಿವಿಧ ಸೆಕ್ಷನ್‌ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಸಿಟ್ಟಾದರು. ಕೂಡಲೆ ರಿಜಿಸ್ಟರ್ ತರಿಸಿಕೊಂಡು ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಹಾಲು ರೇಟ್ ಹೆಚ್ಚಳ, ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ?
ಶೇ.50ರಷ್ಟು ಸಿಬ್ಬಂದಿ ಇಲ್ಲ
ಇನ್ನು, ಪರಿಶೀಲನೆ ವೇಳೆ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಶೇ.50ಕ್ಕಿಂತಲು ಕಡಿಮೆ ಸಿಬ್ಬಂದಿ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹೀಗೆ ಮುಂದುವರೆದೆರೆ ತಾಲೂಕಿನ ಕೆಲಸಗಳು ನಡೆಯುವುದು ಹೇಗೆ ಎಂದು ಪ್ರಶ್ನಿಸಿದರು. ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಸಿಬ್ಬಂದಿ ಕೊರತೆ ಕುರಿತು ತಿಳಿಸಿದರು. ಅಲ್ಲದೆ ನಿಯೋಜನೆ ಮೇಲೆ ತೆರಳಿರುವ ಇಬ್ಬರು ಸಿಬ್ಬಂದಿಯನ್ನು ಕೂಡಲೆ ತೀರ್ಥಹಳ್ಳಿಗೆ ಕಳುಹಿಸುವಂತೆ ಸೂಚನೆ ನೀಡಿದರು.
View this post on Instagram
ತಾಲೂಕು ಕಚೇರಿಯ ವಿವಿಧ ಸೆಕ್ಷನ್‌ಗಳಿಗೆ ತೆರಳಿದ ಮಾಜಿ ಸಚಿವರು ಸಿಬ್ಬಂದಿ ಕೊರತೆ ಮತ್ತು ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















