ತೀರ್ಥಹಳ್ಳಿಯಲ್ಲಿ ಮಂಗನ ಕಾಯಿಲೆ ಆತಂಕ, ಎರಡನೇ ಕೇಸ್ ಪತ್ತೆ, ಮಹಿಳೆ ಆಸ್ಪತ್ರೆಗೆ ದಾಖಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE NEWS | 17 MARCH 2023

THIRTHAHALLI : ತಾಲೂಕಿನಲ್ಲಿ ಮಂಗನ ಕಾಯಿಲೆ (Monkey Fever) ಭೀತಿ ಹೆಚ್ಚಾಗುತ್ತಿದೆ. ಗುತ್ತಿಯಡೇಹಳ್ಳಿಯಲ್ಲಿ ಮತ್ತೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ತಾಲೂಕಿನ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

Monkey-Fever-Thirthahalli-JC-Hospital-KFD

ಗುತ್ತಿಯಡೇಹಳ್ಳಿಯ ಮಹಿಳೆಯೊಬ್ಬರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ) ಸೋಂಕು (Monkey Fever) ಕಾಣಿಸಿಕೊಂಡಿದೆ. 34 ವರ್ಷದ ಸೋಂಕಿಗೆ ತುತ್ತಾಗಿದ್ದು, ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

ಇದೆ ಗ್ರಾಮ 54 ವರ್ಷದ ವ್ಯಕ್ತಿಯೊಬ್ಬರಲ್ಲಿ ಮೂರು ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ.

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ಕೆ.ಎಫ್.ಡಿ ಸೋಂಕು ಪಾಸಿಟಿವ್

Leave a Comment