ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ನವ ವಿವಾಹತೆಯೊಬ್ಬರ ಮೃತದೇಹ ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾದಮಲ್ಲಿ ಘಟನೆ ಸಂಭವಿಸಿದೆ. ಶರ್ಮಿತಾ.ಬಿ.ಯು (24) ಮೃತರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಉಪ್ಪರಿಗೆ ಮೇಲಿನ ಕೊಠಡಿ
ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶರ್ಮಿತಾ ಬೆಳಗ್ಗೆ ಬಹು ಹೊತ್ತಿನ ತನಕ ಹೊರ ಬಂದಿರಲಿಲ್ಲ. ಅನುಮಾನದ ಹಿನ್ನೆಲೆ ಮನೆಯ ಕೆಲಸದವರು ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ರಾತ್ರಿಪಾಳಿ ಕೆಲಸಕ್ಕೆ ತೆರಳಿದ್ದ ಪತಿ
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶರ್ಮಿತಾ 2023ರ ಮಾರ್ಚ್ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು.
ಇದನ್ನೂ ಓದಿ – ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?
ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದೆ ಎಂದ ಹೇಳಲಾಗುತ್ತಿದೆ. ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ?