ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ದೇವಸ್ಥಾನದಲ್ಲಿ ಕಳ್ಳತನ (Theft) ಮಾಡಿದ ಕೇವಲ 2 ಗಂಟೆಯೊಳಗೆ ಆಗುಂಬೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳವು ಮಾಡಲಾಗಿತ್ತು.
ವಿಷಯ ತಿಳಿಯುತ್ತಲೆ ತನಿಖೆ ಆರಂಭಿಸಿದ ಪೊಲೀಸರು ಸುಂಕದ ಹೊಳೆ ಸಮೀಪದ ಏಳಮಲೈ ವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಆತನದಿಂದ ರಾಮಮಂದಿರದಲ್ಲಿ ಕಳವು ಆಗಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆಗುಂಬೆ ಠಾಣೆ ಸಬ್ ಇನ್ಸ್ಪೆಕ್ಟರ್ ಶಿವನಗೌಡ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ದಸ್ತಗಿರಿ ಮಾಡಿದೆ. ಕಾಯಾಚರಣೆಯಲ್ಲಿ ಸಿಬ್ಬಂದಿ ಅನಿಲ್, ಸುರೇಶ್, ರಮೇಶ್, ನಾಗಾರ್ಜುನ, ಅವಿನಾಶ್, ಚೇತನ, ಆದರ್ಶ ಪಾಲ್ಗೊಂಡಿದ್ದರು.

ಇದನ್ನೂ ಓದಿ » ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೇಸ್, ಭದ್ರಾವತಿಯಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Theft case arrest
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















