ವೃದ್ಧೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ತೂಕದ ಗೆಡ್ಡೆ ಹೊರ ತೆಗೆದ ತೀರ್ಥಹಳ್ಳಿ ವೈದ್ಯರು

Published On : ಸೆಪ್ಟೆಂಬರ್ 19, 2022

Published By : ನಿತಿನ್‌ ಆರ್‌.ಕೈದೊಟ್ಲು 

 SHIVAMOGGA LIVE NEWS 

THIRTHAHALLI | ಹೊಟ್ಟೆನೋವಿನಿಂದ ಬಳಲುತ್ತಿದ್ದ ವೃದ್ಧೆಯ ಹೊಟ್ಟೆಯಲ್ಲಿ ಸುಮಾರು 4 ಕೆ.ಜಿ ತೂಕದ ಗೆಡ್ಡೆ ಪತ್ತೆಯಾಗಿದೆ. ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ (OPERATION) ಮಾಡಿ ಗೆಡ್ಡೆಯನ್ನು ಹೊರಗೆ ತೆಗೆದಿದ್ದಾರೆ.

Shimoga Nanjappa Hospital

ಭದ್ರಾವತಿಯ ಅಂತರಗಂಗೆ ನಿವಾಸಿ ಶಾರದಮ್ಮ (65) ಎಂಬುವವರ ಹೊಟ್ಟೆಯಲ್ಲಿ 4 ಕೆ.ಜಿ. ತೂಕದ ಗೆಡ್ಡೆ ಇತ್ತು. ತೀರ್ಥಹಳ್ಳಿ ತಾಲೂಕು ಜಯ ಚಾಮರಾಜೇಂದ್ರ ತಾಲೂಕು ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ.

ಭದ್ರಾವತಿಯಿಂದ ತೀರ್ಥಹಳ್ಳಿಗೆ

ಶಾರದಮ್ಮ ಅವರು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಸ್ಥಳೀಯ ವೈದ್ಯರ ಬಳಿ ತೋರಿಸಿದಾಗ ಗೆಡ್ಡಿ ಇರುವುದು ಗೊತ್ತಾಗಿದೆ.

ಈ ಹಿಂದೆ ಭದ್ರಾವತಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ರಂಗಸ್ವಾಮಿ ಅವರನ್ನು ಸಂಪರ್ಕಿಸಿದ ಶಾರದಮ್ಮ ಶಸ್ತ್ರ ಚಿಕಿತ್ಸೆಗೆ (OPERATION) ಮನವಿ ಮಾಡಿದರು. ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ರಂಗಸ್ವಾಮಿ ಅವರ ಮೇಲೆ ವಿಶ್ವಾಸವಿಟ್ಟು ಶಾರದಮ್ಮ ಅವರು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.

ಶಸ್ತ್ರಚಿಕಿತ್ಸೆ ಮೂಲಕ 4 ಕೆ.ಜಿ. ತೂಕದ ಗೆಡ್ಡೆಯನ್ನು ಹೊರತೆಗೆದಿದ್ದಾರೆ. ಶಾರದಮ್ಮ ಅವರು ಆರೋಗ್ಯವಾಗಿದ್ದಾರೆ. ಡಾ.ರಂಗಸ್ವಾಮಿ ಅವರೊಂದಿಗೆ ಡಾ.ಸುಮಾ ಮತ್ತು ಸಿಬ್ಬಂದಿ ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದರು.

SARJI HOSPITAL SHIMOGA

ಕ್ಲಿಕ್ ಮಾಡಿ ಇದನ್ನೂ ಓದಿ ಮಕ್ಕಳ ಕಳ್ಳಿ ಅಂತಾ ಮಹಿಳೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ, ವಿಚಾರಣೆ ವೇಳೆ ಗೊತ್ತಾಗಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 19, 2022

Leave a Comment