ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ, ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | SHIMOGA | 12 ಜೂನ್ 2022

ಪಠ್ಯ ಪುಸ್ತಕ ಪರಿಷ್ಕರಣೆ ಮತ್ತು ಕುವೆಂಪು ಅವರಿಗೆ ಅವಮಾನ ಖಂಡಿಸಿ ಜೂನ್ 15ರಂದು ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯತ್ರೆ (PADAYATHRE) ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ತಿಳಿಸಿದರು.

Shimoga Nanjappa Hospital

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಜೂ.15ರಂದು ಬೆಳಗ್ಗೆ 7 ಗಂಟೆಗೆ ಕುವೆಂಪು ಸಮಾಧಿಗೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆ ಆರಂಭಿಸಲಾಗುತ್ತದೆ. 18 ಕಿ.ಮೀ ಪಾದಯಾತ್ರೆ ನಡೆಯಲಿದೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಪಾದಯಾತ್ರೆ ತೀರ್ಥಹಳ್ಳಿ ತಲುಪಲಿದೆ. ಇಲ್ಲಿನ ಟೌನ್ ಹಾಲ್’ನಲ್ಲಿ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಕುವೆಂಪು ಬಗ್ಗೆ ಅವರಿಗೆ ಗೊತ್ತಿಲ್ಲ

ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಗೊತ್ತಿಲ್ಲ. ಕುವೆಂಪು ಅವರು ತೀರ್ಥಹಳ್ಳಿಯವರು ಎಂಬುದು ಅವರಿಗೆ ತಿಳಿದಿಲ್ಲ. ಗೃಹ ಸಚಿವರು ಚಿಂತನ ಗಂಗಾ ಮಾತ್ರ ಓದಿದ್ದಾರೆ. 1994ರಲ್ಲಿ ಕುವೆಂಪು ಅವರು ನಿಧನರಾದಾಗ ನಮ್ಮ ಅಭ್ಯರ್ಥಿ ಚಂದ್ರೇಗೌಡ ಅವರು ಚುನಾವಣಾ ಪ್ರಚಾರ ಸೇರಿದಂತೆ ಎಲ್ಲಾ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ್ದರು. ಆದರೆ ಆರಗ ಜ್ಞಾನೇಂದ್ರ ಅವರು ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದರು ಎಂದು ಕಿಮ್ಮನೆ ರತ್ನಾಕರ್ ಅವರು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ವಕೀಲ ಕೆ.ಪಿ.ಶ್ರೀಪಾಲ್, ಸಾಹಿತಿ ಚಂದ್ರೇಗೌಡ ಅವರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ – ಮುಪ್ಪಾನೆ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಏನೆಲ್ಲ ಸಮಸ್ಯೆ ಆಗುತ್ತಿದೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment