ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಅಕ್ಟೋಬರ್ 2020
ಪಶ್ಚಿಮಘಟ್ಟದ ಗ್ರಾಮಗಳಲ್ಲಿನ ಜನರಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನವೆಂಬರ್ 7 ರಿಂದ 9ರವರೆಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥಗೌಡ, ಬಿದರಗೋಡಿನಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ. ಮೊದಲ ದಿನ ಬಿದರಗೋಡಿನಿಂದ ಗುಡ್ಡೇಕೇರಿವರೆಗೆ ಪಾದಯಾತ್ರೆ ನಡೆಯಲಿದೆ. 2ನೇ ದಿನ ಗುಡ್ಡೇಕೇರಿಯಿಂದ ರಂಜದಕಟ್ಟೆವರೆಗೆ, 3ನೇ ದಿನ ರಂಜದಕಟ್ಟೆಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಕೇರಳ ಮಾದರಿ ವರದಿ ಜಾರಿಗೊಳಿಸಿ
ಕಸ್ತೂರಿ ರಂಗನ್ ವರದಿಯಲ್ಲಿ ವಾಸ್ತವಾಂಶವನ್ನು ಮುಚ್ಚಿಡಲಾಗಿದೆ. ಪಶ್ಚಿಮಘಟ್ಟದ ಹಳ್ಳಿಗಳ ಜನರ ಭಾವನೆಗಳಿಗೆ ಬೆಲೆ ಕೊಡದೆ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕೇರಳ ಮಾದರಿಯಲ್ಲಿ ವರದಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥಗೌಡ ಪ್ರಶ್ನಿಸಿದರು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಜೀನಾ ವಿಕ್ಟರ್, ತಾಲೂಕು ಅಧ್ಯಕ್ಷ ಡಾ.ಟಿ.ಎಲ್.ಸುಂದರೇಶ್, ಕಟ್ಟೆಹಕ್ಕಲು ಕಿರಣ್, ಹೊರಬೈಲು ರಾಮಕೃಷ್ಣ, ರಾಘವೇಂದ್ರ ಶೆಟ್ಟಿ, ಕಲ್ಗದ್ದೆ ರತ್ನಾಕರ್, ಕುರುವಳ್ಳಿ ನಾಗರಾಜ್, ಅಶ್ವಲ್ ಗೌಡ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422