ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021
ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು
ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ ಹೋರಾಟ ಅಂತಿಮ ಘಟ್ಟ ತಲುಪಬೇಕಿದೆ ಎಂದರು.
ಪಾದಯಾತ್ರೆಯಲ್ಲಿ ಜನರೊಂದಿಗೆ ನಡೆದ ಕಾಗೋಡು
ಶರಾವತಿ, ವರಾಹಿ, ಚಕ್ರಾ, ಸಾವೆಹಕ್ಲು ಮುಳುಗಡೆ ಸಂತ್ರಸ್ತರು, ಬಗರ್ ಹುಕುಂ ರೈತರು ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಚಾಲನೆ ನೀಡಿದ ಕಾಗೋಡು ತಿಮ್ಮಪ್ಪ ಅವರು ವಯಸ್ಸು ಮತ್ತು ಆರೋಗ್ಯವನ್ನು ಲೆಕ್ಕಸಿದೆ, ರೈತರೊಂದಿಗೆ ಬಹುದೂರ ನಡೆದರು. ಪಾದಯಾತ್ರೆಯಲ್ಲಿ ಪಾಲ್ಗೊಂಡವರ ಉತ್ಸಾಹ ಹೆಚ್ಚಿಸಿದರು.
ಮೂರು ದಿನ ನಿರಂತರ ಪಾದಯಾತ್ರ
ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಕಲ್ಲುಕೊಪ್ಪದಿಂದ ಪಾದಯಾತ್ರೆ ಆರಂಭವಾಗಿದೆ. ಮೊದಲ ದಿನ ಕಲ್ಲುಕೊಪ್ಪದಿಂದ ಕನ್ನಂಗಿವರೆಗೆ ಪಾದಯಾತ್ರೆ ನಡೆಯಲಿದೆ. ಎರಡನೆ ದಿನ ಕನ್ನಂಗಿಯಿಂದ ಬಾಳಗಾರು ಗ್ರಾಮದವರೆಗೆ, ಮೂರನೆ ದಿನ ಬಾಳಗಾರು ಗ್ರಾಮದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಸುಂದರೇಶ್, ವಕೀಲ ಶ್ರೀಪಾಲ್, ಕೆ.ಎಲ್.ಅಶೋಕ್, ಎಂ.ಗುರುಮೂರ್ತಿ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ಬಿ.ಆರ್.ಜಯಂತ್, ಶ್ರೀನಿವಾಸ್ ಕರಿಯಣ್ಣ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200