ತೀರ್ಥಹಳ್ಳಿಯಲ್ಲಿ ಪಾದಯಾತ್ರೆಯ ಸಮಾರೋಪ, ಯಾರೆಲ್ಲ ಏನೇನು ಮಾತಾಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | THIRTHALLI| 14 ಜೂನ್ 2022

ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯನ್ನು ವಿಸರ್ಜನೆ ಮಾಡಲಾಗಿದೆ. ಆದರೆ ಪಠ್ಯ ಪುಸ್ತಕವನ್ನು ವಿಸರ್ಜನೆ ಮಾಡಿಲ್ಲ. ಈ ಸರ್ಕಾರ ನಮ್ಮ ಮಕ್ಕಳಿಗೆ ವಿಷ ಉಣಿಸುವ ಕೆಲಸ ಮಾಡುತ್ತಿದೆ. ಇದನ್ನ ನಾವು ತಡೆಗಟ್ಟದೆ ಹೋದರೆ ಇಡಿ ಬದುಕನ್ನೆ ಹಾಳು ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

Shimoga Nanjappa Hospital

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿರುವ ಪಠ್ಯವನ್ನ ವಜಾಗೊಳಿಸಬೇಕು ಎಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಡೆದ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿದರು. ತೀರ್ಥಹಳ್ಳಿಯ ಸಂಸ್ಕೃತಿ ಮಂದಿರದ ಎದುರು ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು.

ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಿದೆ. ಇದರ ವಿರುದ್ಧ ಕನ್ನಡದ ಮನಸುಗಳು ಹೋರಾಟ ಮಾಡಬೇಕಿದೆ. ರಾಜಕೀಯೇತರವಾಗಿ ಈ ಹೋರಾಟ ನಡೆಯಬೇಕಿದೆ ಎಂದು ತಿಳಿಸಿದರು.

ದೇಶದಲ್ಲಿ ಅನೇಕ ಭಾರಿ ಚರಿತ್ರೆಯನ್ನು ತಿದ್ದಿದ್ದಾರೆ. ಈಗ ಪುನಃ ಚರಿತ್ರೆಯನ್ನ ತಿದ್ದಲು ಮುಂದಾಗಿದ್ದಾರೆ. ನಮ್ಮ ಮಕ್ಕಳಿಗೆ ಎಂತಹ ಜ್ಞಾನ ತಿಳಿಸಬೇಕು ಅನ್ನುವುದು ಮುಖ್ಯ. ಮತ್ತೆ ವೈದಿಕ ಧರ್ಮದ ಕಡೆಗೆ ಜನರನ್ನು ಎಳೆದು ತರುವ ಪ್ರಯತ್ನ ಮಾಡಲಾಗುತ್ತಿದೆ. ಈ ಕುರಿತು ಎಲ್ಲರು ಎಚ್ಚರ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮನುವಾದಿಗಳಿಗೆ ಸಮಾನತೆ ಇಷ್ಟವಿಲ್ಲ

ಭಾರತದ ಸಂವಿಧಾನ ಸಮಾನತೆಯನ್ನು ಹೇಳುತ್ತದೆ. ಜಾತ್ಯತೀತ ತತ್ವ ಬೋಧಿಸುತ್ತದೆ. ಇದು ಮನವಾದಿಗಳಿಗೆ ಇಷ್ಟವಾಗುವುದಿಲ್ಲ. ಆರ್.ಎಸ್.ಎಸ್ ಮತ್ತು ಅಂಗ ಸಂಸ್ಥೆಗಳಿಗೆ ಸಂವಿಧಾನದ ಬಗ್ಗೆ ಒಪ್ಪಿಗೆ ಇಲ್ಲ. ಸಾವಿರಾರು ವರ್ಷದಿಂದ ಮೇಲ್ವರ್ಗದ ಜನರು ಕೆಳವರ್ಗದವರ ಮೇಲೆ ದಬ್ಬಾಳಿಕೆ, ದೌರ್ಜನ್ಯ ಮಾಡಿಕೊಂಡು ಬಂದಿದ್ದಾರೆ. ಇದು ಮುಂದುವರೆಯಬೇಕು ಎಂಬುದು ಮನುವಾದಿಗಳ ಬಯಕೆಯಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಮಾನಸಿಕ ಕೊಳಚೆ ತುಂಬಲಾಗುತ್ತಿದೆ

ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದ ಸಾಹಿತಿ ಪ್ರೊ. ಸಿದ್ದರಾಮಯ್ಯ ಅವರು, ನಾಡಗೀತೆಗೆ ಅಣಕ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿ ವಿಕಾರ ಮನಸಿವ ವ್ಯಕ್ತಿಗೆ ಪಠ್ಯ ಪಸ್ತಕ ಪರಿಷ್ಕರಣೆ ಮಾಡಲು ಹೊಣೆ ಹೊರಿಸಿದ್ದು ನಾಚಿಕೆಗೇಡಿನ ಸಂಗತಿ. ದೇಶ ಪ್ರೇಮದ ಹೆಸರಿನಲ್ಲಿ ಪಠ್ಯದಲ್ಲಿ ಮಾನಸಿಕ ಕೊಳಚೆ ತುಂಬಲಾಗುತ್ತಿದೆ ಎಂದು ಟೀಕಿಸಿದರು.

siddaramaiah photo

ಜ್ಞಾನವಿಲ್ಲದ ಸಚಿವ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜ್ಞಾನವಿಲ್ಲದ ಸಚಿವ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಪೊಲೀಸ್ ಇಲಾಖೆಯಲ್ಲಿನ ದುಸ್ಥಿತಿ ಗಮನಿಸಿದರೆ ಸಚಿವರಿಗೆ ಜ್ಞಾನವಿಲ್ಲ ಅನ್ನುವುದು ಗೊತ್ತಾಗುತ್ತದೆ. ಇನ್ನು, ಶಿಕ್ಷಣ ಸಚಿವ ನಾಗೇಶ್ ಅವರು ಆರ್.ಎಸ್.ಎಸ್ ಸೇರಿಕೊಂಡು ಅವರು ಬರಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಿಸಿದರು.

ಜ್ಞಾನೇಂದ್ರ ರಾಜೀನಾಮೆ ನೀಡಬೇಕಿತ್ತು

ರಾಷ್ಟ್ರಕವಿ ಕುವೆಂಪು ಅವರು ತೀರ್ಥಹಳ್ಳಿಯವರು. ಅವರಿಗೆ ಅವಮಾನ ಆದಾಗ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ಕೊಟ್ಟು ಬರಬೇಕಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಅವರನ್ನು ಸೋಲಿಸಿ ಎಂತಹವನ್ನು ಆಯ್ಕೆ ಮಾಡಿದ್ದೀರ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದರು.

ಗಾಂಧಿ ಕೊಲ್ಲುವಾಗಲೂ ನಮಸ್ಕಾರ ಮಾಡಿದ್ದರು

ಮಹಾತ್ಮ ಗಾಂಧೀಜಿ ಅವರನ್ನು ಕೊಲ್ಲುವ ಮೊದಲು ನಾಥೋರಾಮ್ ಗೋಡ್ಸೆ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದ. ಆ ಬಳಿಕ ಗುಂಡು ಹೊಡೆದಿದ್ದ. ನಮ್ಮ ಪ್ರಧಾನಿ ಕೂಡ ಹಾಗೆ ಮಾಡಿದ್ದಾರೆ. ಮೊದಲು ಸಂಸತ್ತಿಗೆ ತಲೆ ಬಾಗಿ ನಮಸ್ಕಾರ ಮಾಡಿದ್ದರು. ಈಗ ಹಲವರನ್ನು ಬಿಟ್ಟು ಸಂವಿಧಾನದ ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಟೀಕಿಸಿದರು.

ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವಿಶ್ವಮಾನವ ವೇದಿಕೆಯ ಸಂಚಾಲಕ ಕಡಿದಾಳು ದಯಾನಂದ್, ಡಾ.ನಾ ಡಿಸೋಜಾ, ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ರೈತ ಮುಖಂಡರಾದ ಕೆ.ಟಿ.ಗಂಗಾಧರ್ ಹಾಗೂ ಬಸವರಾಜಪ್ಪ, ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಎಚ್.ಎಸ್. ಸುಂದರೇಶ್ ಮುಂತಾದವರು ವೇದಿಕೆಯಲ್ಲಿದ್ದರು.

ಇದನ್ನೂ ಓದಿ – ಸಿದ್ದರಾಮಯ್ಯ, ಹೆಲಿಕಾಪ್ಟರ್ ನೋಡಲು ತರಗತಿ ಅರ್ಧಕ್ಕೆ ಬಿಟ್ಟು ಬಂದ ತೀರ್ಥಹಳ್ಳಿ ವಿದ್ಯಾರ್ಥಿಗಳು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment