ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ನೀತಿಗಳ ವಿರುದ್ಧ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು.
ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಕೇಂದ್ರ ಸರ್ಕಾರ, ಹಿಂದೂ ದೇಗುಲಗಳನ್ನು ಕೆಡವಿ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರ ಮತ್ತು ದೇಶಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಂಜಿನ ಮೆರವಣಿಗೆ ನಡೆಸಲಾಯಿತು.
ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥಗೌಡ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಹಾದಿಯುದ್ದಕ್ಕೂ ಬಳಗದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಘೋಷಣೆ ಕೂಗಿದರು.
ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಪ್ರಮುಖರಾದ ಅಶ್ವಲ್ ಗೌಡ, ನಾಗರಾಜ್ ಪೂಜಾರಿ, ಡಾ. ಸುಂದರೇಶ್ ಸೇರಿದಂತೆ ಹಲವರು ಮೆರವಣಿಗೆಯಲ್ಲಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor
ನಿತಿನ್ ಆರ್.ಕೈದೊಟ್ಲು






