SHIVAMOGGA LIVE NEWS | 14 MAY 2024
THIRTHAHALLI : ಹಾಸನ ಪೆನ್‌ಡ್ರೈವ್ ಪ್ರಕರಣದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆ ಬದಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕು ಜೆಡಿಎಸ್ ವತಿಯಿಂದ ಆಗ್ರಹಿಸಿಲಾಯಿತು.
![]() |
ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರ ಜೆಡಿಎಸ್ ಕಾರ್ಯಕರ್ತರು, ಪೆನ್ ಡ್ರೈವ್ ವಿಚಾರದಲ್ಲಿ ಜೆಡಿಎಸ್ ಪಕ್ಷದ ನಾಯಕರ ವಿರುದ್ಧ ಅಪವಾದ ಹೊರಿಸಿ ಪಕ್ಷವನ್ನು ದರ್ಬಲಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಪ್ರಕರಣದ ತನಿಖೆ ಮೇಲೆ ಪ್ರಭಾವ ಬೀರುತ್ತಿರುವ ಡಿ.ಕೆ.ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಜೊತೆಗೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಪಕ್ಷಕ್ಕೆ ಕಳಂಕ ತರುವ ಪ್ರಯತ್ನ ಸಫಲವಾಗುವುದಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. (pen drive issue)
ಜೆಡಿಎಸ್ ತಾಲೂಕು ಅಧ್ಯಕ್ಷ ಕುಣಜೆ ಕಿರಣ್, ಪ್ರಧಾನ ಕಾರ್ಯದರ್ಶಿ ಗುರುದತ್, ನೆಂಪೆ ಸುರೇಂದ್ರ ಸೇರಿದಂತೆ ಹಲವರು ಇದ್ದರು.
ಮಹಿಳೆಯರ ಖಾಸಗಿತನಕ್ಕೆ ಧಕ್ಕೆ
SHIMOGA : ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ವಿವಿಧೆಡೆ ಹಂಚಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದರೆ ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಆರೋಪಿಗಳ ರಕ್ಷಣೆ ಮಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಆರೋಪಿಸಿದರು. ಮಹಿಳೆಯರ ಮುಖ ಮರೆ ಮಾಚದೆ ಅವರ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಈ ಕೂಡಲೆ ಅಶ್ಲೀಲ ವಿಡಿಯೋ ಹಂಚಿಕೆ ತಡೆಯಬೇಕು. ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200