ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 23 JUNE 2023

THIRTHAHALLI : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮನೆಯೊಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದರು. ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಇಬ್ಬರು ಯುವಕರನ್ನು ಬಂಧಿಸಲಾಗಿದೆ.

Police-Jeep-at-Shimoga-General-Image

ತೀರ್ಥಹಳ್ಳಿ ಪಟ್ಟಣದಲ್ಲಿ ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್‌.ಕೆ.ಎಸ್‌ (33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ.ಎಂ (37) ಎಂಬುವನನ್ನು ಬಂಧಿಸಲಾಗಿದೆ.

ಮೂವರು ಮಹಿಳೆಯರ ರಕ್ಷಣೆ

ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಪೊಲೀಸರು ದಾಳಿ (Police Raid) ನಡೆಸಿದ್ದರು. ಮನೆಯಲ್ಲಿ ಮೂವರು ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅವರನ್ನು ರಕ್ಷಿಸಲಾಗಿದೆ.

ಇದನ್ನೂ ಓದಿ – ಅಪ್ರಾಪ್ತನಿಗೆ ಬೈಕ್‌ ಕೊಟ್ಟ ಮಾಲೀಕನಿಗೆ ಎದುರಾಯ್ತು ಸಂಕಷ್ಟ, ಏನಾಯ್ತು?

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತೀರ್ಥಹಳ್ಳಿ ಇನ್ಸ್‌ಪೆಕ್ಟರ್‌ ಅಶ್ವಥಗೌಡ, ಪಿಎಸ್‌ಐ ಸಾಗರ್‌ ಅತ್ತರವಾಲ, ಪಿಎಸ್‌ಐ ಗಾದಿಲಿಂಗಪ್ಪ ಗೌಡರ್‌, ಪೊಲೀಸ್‌ ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರದ ಕಿರಣ್‌ ಕುಮಾರಿ ದಾಳಿಯಲ್ಲಿ ಭಾಗವಹಿಸಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2023

Leave a Comment