ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 29 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿದ್ಯುತ್ ಬಿಲ್ ಪಾವತಿ ಮಾಡದ ಗ್ರಾಮ ಪಂಚಾಯಿತಿಗಳಿಗೆ ಮೆಸ್ಕಾಂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಮೀಟರ್’ಗಳಿಗೆ ಅಳವಡಿಸಿದ್ದ ಫ್ಯೂಸ್ ಕಿತ್ತೊಯ್ದಿದ್ದಾರೆ.
ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ಮತ್ತು ಮುಳಬಾಗಿಲು ಗ್ರಾಮ ಪಂಚಾಯಿತಿ ಕಚೇರಿಗಳ ವಿದ್ಯುತ್ ಕಡಿತಗೊಳಿಸಲಾಗಿದೆ.
ಎಷ್ಟೆಷ್ಟು ಬಾಕಿ ಇದೆ?
ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯು ತಾಲೂಕಿನ ಅತಿದೊಡ್ಡ ಮತ್ತು ತೆರಿಗೆ, ರಾಯಲ್ಟಿ ರೂಪದಲ್ಲಿ ಅತಿ ಹೆಚ್ಚು ಆದಾಯ ಹೊಂದಿದೆ. ಆದರೆ 42 ಲಕ್ಷ 22 ಸಾವಿರ ರೂ. ಬಾಕಿ ಉಳಿಸಿಕೊಂಡಿದೆ. ಇತ್ತ, ಮುಳಬಾಗಿಲು ಗ್ರಾಮ ಪಂಚಾಯಿತಿಯು 7 ಲಕ್ಷ 52 ಸಾವಿರ ರೂ. ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ಲಕ್ಷ ಲಕ್ಷದ ವಿದ್ಯುತ್ ಬಿಲ್
ಗ್ರಾಮದ ವ್ಯಾಪ್ತಿಯಲ್ಲಿನ ಬೀದಿ ದೀಪಗಳು, ಕುಡಿಯುವ ನೀರಿನ ಪಂಪ್ ಸೇರಿದಂತೆ ವಿವಿಧ ಕಾರ್ಯಕ್ಕೆ ವಿದ್ಯುತ್ ಬಳಕೆ ಮಾಡಿಕೊಳ್ಳಲಾಗುತ್ತದೆ. ಅದಕ್ಕೆ ಗ್ರಾಮ ಪಂಚಾಯಿತಿಯೆ ವಿದ್ಯುತ್ ಬಿಲ್ ಪಾವತಿಸಬೇಕು. ಆದರೆ ಮೇಲಿನ ಕುರುವಳ್ಳಿ ಮತ್ತು ಮುಳಬಾಗಿಲು ಗ್ರಾಮ ಪಂಚಾಯಿತಿಗಳು ಲಕ್ಷ ಲಕ್ಷ ಪಾವತಿಸದೆ ಹಾಗೆ ಉಳಿಸಿಕೊಂಡಿದ್ದವು.
ನೊಟೀಸ್ ನೀಡಿದರೂ ಕ್ಯಾರೆ ಅನ್ನಲಿಲ್ಲ
ಮೆಸ್ಕಾಂ ಅಧಿಕಾರಿಗಳು ಬಿಲ್ ಬಾಕಿ ಇರುವ ಕುರಿತು ಈ ಗ್ರಾಮ ಪಂಚಾಯಿತಿಗಳಿಗೆ ತಿಳಿಸಿದ್ದರು. ಈ ಸಂಬಂಧ ನೊಟೀಸ್ ಕೂಡ ನೀಡಲಾಗಿದೆ. ಹಾಗಿದ್ದೂ ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಇವತ್ತು ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಧಾನ ಸಭೆಯಲ್ಲೂ ಚರ್ಚೆ
ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳು ಎಸ್ಕಾಂಗಳಿಗೆ ವಿದ್ಯುತ್ ಬಿಲ್ ಪಾವತಿ ಮಾಡದೆ ಉಳಿಸಿಕೊಂಡಿವೆ. ಇದರಿಂದ ಎಸ್ಕಾಂಗಳು ಸಂಕಷ್ಟಕ್ಕೆ ಸಿಲುಕಿವೆ. ಬೆಳಗಾವಿ ಅಧಿವೇಶನದಲ್ಲೂ ಈ ಸಂಬಂಧ ಚರ್ಚೆಯಾಗಿತ್ತು. ರಾಜ್ಯಾದ್ಯಂತ ಸರ್ಕಾರದಿಂದಲೇ ಎಲ್ಲಾ ಎಸ್ಕಾಂಗಳಿಗೆ 5,975 ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯ ಮೆಸ್ಕಾಂಗೆ ಸರ್ಕಾರದಿಂದ 80 ಕೋಟಿ ರೂ. ಬಾಕಿ ಬರಬೇಕಿದೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತಗೊಳಿಸಲು ಎಸ್ಕಾಂಗಳು ಮುಂದಾಗಿವೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






