ತೀರ್ಥಹಳ್ಳಿ: ಸುರಳ್ಳಿ ಬಾಳೆಬೈಲ್ ನಿವಾಸಿ ಮಹಮ್ಮದ್ ಮುತಿಬ್ (32) ಎಂಬುವವರು ತಮಗೆ ಮೊದಲೇ ಮದುವೆಯಾಗಿ (Marriage) ಮಗಳಿದ್ದರೂ, ಆ ವಿಷಯವನ್ನು ಮುಚ್ಚಿಟ್ಟು ಸುಳ್ಳು ದಾಖಲೆಗಳನ್ನು ನೀಡಿ ಶಿವಮೊಗ್ಗದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎರಡನೇ ಮದುವೆಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಅಪಘಾತ, ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ
ಪ್ರಕರಣದ ತನಿಖೆ ನಡೆಸಿದ್ದ ಆಗಿನ ಪಿ.ಎಸ್.ಐ ಶಾಂತಲಾ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿ ಮೇಲಿನ ಅಪರಾಧ ಸಾಬೀತಾಗಿದೆ ಎಂದು ತೀರ್ಪು ನೀಡಿದೆ.

ನ್ಯಾಯಾಧೀಶರಾದ ಸಿದ್ದರಾಜು ಎನ್.ಕೆ ಅವರು ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ ಮತ್ತು ₹5,000 ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ 30 ದಿನ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಕಿರಣ್‌ಕುಮಾರ್ ಅವರು ವಾದ ಮಂಡಿಸಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.







