ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಅಕ್ಟೋಬರ್ 2020
ಮಧ್ಯವರ್ತಿಗಳಿಂದಾಗಿ ತಾಲೂಕು ಕಚೇರಿಯಲ್ಲಿ ನಕಲು ದಾಖಲೆ ಸಿದ್ಧವಾಗುತ್ತಿದೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯರ್ತರು, 1972ರಲ್ಲಿ ವಿವಿಧ ಯೋಜನೆಯಡಿ ಫಲಾನುಭವಿಗಳನ್ನು ಗುರುತಿಸಿ ಹಕ್ಕುಪತ್ರ ನೀಡಿದೆ. ಆದರೆ ಇತ್ತೀಚೆಗೆ ನಕಲಿ ಹಕ್ಕುಪತ್ರಗಳನ್ನು ಸೃಷ್ಟಿಸುವ ದಂಧೆ ನಡೆಯುತ್ತಿದೆ. ಇವರಿಂದಾಗಿ ಜನರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
ನಕಲಿ ಹಕ್ಕುಪತ್ರ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದರು. ಕರವೆ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಜಿಲ್ಲಾ ಸಂಚಾಲಕ ಹರ್ಷೇಂದ್ರಕುಮಾರ್, ತಾಲೂಕು ಅಧ್ಯಕ್ಷ ಯಡೂರು ಸುರೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ, ನಗರ ಘಟಕದ ಅಧ್ಯಕ್ಷ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]