ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019
ಪ್ರಕೃತಿ ಸೌಂದರ್ಯ, ಸೂರ್ಯಾಸ್ತಮಾನ ವೀಕ್ಷಣೆಗೆ ಪ್ರಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.
ಆಗುಂಬೆಯಲ್ಲಿ ಅಭಯಾರಣ್ಯ, ನಕ್ಸಲ್ ಬಾಧಿತ ಪ್ರದೇಶವೆಂಬ ಕಾರಣಕ್ಕೆ ನಲುಗಿ ಹೋಗಿದ್ದೇವೆ. ಈಗ ಮದ್ಯದಂಗಡಿ ತೆರೆದರೆ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಸದ್ಯ ಇಲ್ಲಿಗೆ ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಪ್ರಕೃತಿ ಸೌಂದರ್ಯ ಸವಿಯಲು ಪ್ರಶಸ್ತ ಸ್ಥಳವಾಗಿದೆ. ಉದ್ದೇಶಿತ ಮದ್ಯದಂಗಡಿ ತೆರೆದರೆ, ಇಡೀ ವಾತಾವರಣ ಹಾಳಾಗಲಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈಗ ಸ್ಥಾಪಿಸಲು ಹೊರಟಿರುವ ಮದ್ಯದಂಗಡಿಯು ಬಸ್ ನಿಲ್ದಾಣ ಮತ್ತು ಆಂಜನೇಯ ದೇವಸ್ಥಾನದ ಸಮೀಪದಲ್ಲಿದೆ. ಜನವಸತಿ ಪ್ರದೇಶವು ಆಗಿದೆ. ಈ ಸೂಕ್ಷ್ಮ ವಿಚಾರಗಳನ್ನು ಆಧಾರವಾಗಿ ಇಟ್ಟುಕೊಂಡು, ಇಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಕೊಡಬಾರದು ಎಂದು ಆಗುಂಬೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






