NEWS HIGHLIGHTS
SHIVAMOGGA LIVE NEWS | 6 OCTOBER 2023
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
THIRTHAHALLI : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಮನೆಗಳ ಮೇಲೆ ಇ.ಡಿ ದಾಳಿ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ (Protest March) ನಡೆಸಲಾಯಿತು.

ಗಾಂಧಿ ಭವನದಿಂದ ತಾಲೂಕು ಕಚೇರಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ವಹಿಸಿದ್ದರು.
ಯಾರೆಲ್ಲ ಏನೇನು ಹೇಳಿದರು?
ಮಂಜುನಾಥಗೌಡ ಅವರ ವಿರುದ್ಧ ಈಗಾಗಲೆ ತನಿಖೆಯಾಗಿದೆ. ಈಗ ಹೊಸದಾಗಿ ತನಿಖೆ ನಡೆಸಲು ಏನಿದೆ? ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷ ಸಂಘಟಿತವಾಗುತ್ತಿದೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಕೇಂದ್ರ ಸರ್ಕಾರ ಮಂಜುನಾಥಗೌಡ ಅವರಿಗೆ ಹಿಂಸೆ ಕೊಡಲು ಮುಂದಾಗಿದೆ. ಇದಕ್ಕೆ ಸ್ಥಳೀಯ ಶಾಸಕರ ಬೆಂಬಲವು ಇದೆ.ಕಿಮ್ಮನೆ ರತ್ನಾಕರ್, ಮಾಜಿ ಸಚಿವ
ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಳಿಕ ಸಹಕಾರಿ ಕ್ಷೇತ್ರದಲ್ಲಿರುವವರು ಖುಷಿ ಪಟ್ಟಿದ್ದಾರೆ. ಬಿಜೆಪಿಯವರಿಗೆ ಯಾರ ಬೆಳವಣಿಗೆಯನ್ನೂ ಸಹಿಸಲು ಆಗದು. ಅದರ ಪರಿಣಾಮ ಈ ಇ.ಡಿ ದಾಳಿ.ಹೆಚ್.ಎಸ್.ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಪ್ರಮುಖರಾದ ಕಲಗೋಡು ರತ್ನಾಕರ್, ವಿಜಯದೇವ್, ಮುಡುಬ ರಾಘವೇಂದ್ರ, ಕೆಸ್ತೂರು ಮಂಜುನಾಥ್, ಗೀತಾ ರಮೇಶ್, ರೆಹಮತುಲ್ಲಾ ಅಸಾದಿ, ಬಂಡಿ ರಾಮಚಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು