ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 AUGUST 2023
THIRTHAHALLI : ಅಕ್ರಮ ಚಟುವಟಿಕೆ ಆರೋಪದ ಮೇಲೆ ರೆಸಾರ್ಟ್ (Resort) ಒಂದರ ಮೇಲೆ ಪೊಲೀಸರು ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿಯ (Thirthahalli) ವಿಹಂಗಮನ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ 1 ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ಒಂದು ಕತ್ತಿ, ಒಂದು ಚಾಕು, ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, ಆರು ಜಿಂಕೆ ಕೊಂಬಿನ ಟ್ರೊಫಿ, ಒಂದು ಸಿಸಿಟಿವಿ ಡಿವಿಆರ್ 7,650 ರೂ. ಮೌಲ್ಯದ 51 ಬಿಯರ್ ಟಿನ್‌ಗಳು, 1 ಲಕ್ಷ ರೂ. ಮೌಲ್ಯದ ಮದ್ಯ ತುಂಬಿದ ಬಾಟಲಿಗಳು, 750 ರೂ. ಮೌಲ್ಯದ ಬ್ರೀಸರ್ ಬಾಟಲ್, 3 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ – ವಡ್ಡಿನಕೊಪ್ಪ ಬಳಿ ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಂದಿದ್ದ ಪತಿಗೆ ಶಿಕ್ಷೆ ಪ್ರಕಟ, ಏನಿದು ಪ್ರಕರಣ?
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ, ತೀರ್ಥಹಳ್ಳಿ ಇನ್ಸ್‌ಪೆಕ್ಟರ್ ಅಶ್ವಥ ಗೌಡ ನೇತೃತ್ವದಲ್ಲಿ ದಾಳಿಯಾಗಿದೆ. ತೀರ್ಥಹಳ್ಳಿ ಸಬ್ ಇನ್ಸ್‌ಪೆಕ್ಟರ್ ಸಾಗರ ಅತ್ತರವಾಲ, ಮಾಳೂರು ಸಬ್ ಇನ್ಸ್‌ಪೆಕ್ಟರ್ ನವೀನ್ ಮಠಪತಿ, ಆಗುಂಬೆ ಸಬ್ ಇನ್ಸ್‌ಪೆಕ್ಟರ್ ರಂಗನಾಥ ಅಂತರಗಟ್ಟಿ, ರಿಪ್ಪನ್‌ಪೇಟೆ ಸಬ್ ಇನ್ಸ್‌ಪೆಕ್ಟರ್ ಪ್ರವೀಣ್, 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.