ಎದೆ ಮಟ್ಟದ ನೀರಿನಲ್ಲಿ ಮೃತದೇಹ ಹೊತ್ತು ಸಾಗಿಸಿದ ಗ್ರಾಮಸ್ಥರು, ವಿಡಿಯೋ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ತೀರ್ಥಹಳ್ಳಿ | ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದೆ, ಎದೆ ಮಟ್ಟದವರೆಗೆ ಹರಿಯುತ್ತಿರುವ ನೀರಿನಲ್ಲೇ (RAIN EFFECT) ಮೃತದೇಹ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

Shimoga Nanjappa Hospital

ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ತಮ್ಮಯ್ಯ ಗೌಡ (80) ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನೀರಿನಲ್ಲಿ ಮೃತದೇಹದ ಮೆರವಣಿಗೆ

ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ ರಸ್ತೆಯಲ್ಲಿ ನೀರು ಹರಿಯುತ್ತದೆ. ತಮ್ಮಯ್ಯ ಗೌಡ ಅವರು ನಿಧನರಾದ ಹಿನ್ನೆಲೆ ಅವರ ಮೃತದೇವಹನ್ನು ಹರಿಯುವ ನೀರಿನಲ್ಲೇ ಮೆರವಣಿಗೆ ಮಾಡಲಾಯಿತು.

ಆರು ಮಂದಿ ಮೃತದೇಹವನ್ನ ನೀರಿನಲ್ಲಿ ಸಾಗಿಸುವ ದೃಶ್ಯವನ್ನು ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಹೊತ್ತವರ ಎದೆ ಮಟ್ಟದವರೆಗೂ ನೀರು (RAIN EFFECT)  ಬಂದಿದೆ. ಇದೆ ದುಸ್ಥಿತಿಯಲ್ಲಿ ಮೃತದೇಹವನ್ನು ಸಂಬಂಧಿಗಳು, ಗ್ರಾಮಸ್ಥರು ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದಾರೆ.

ಸುರಿಯುವ ಮಳೆಯಲ್ಲೇ ಅಂತ್ಯಸಂಸ್ಕಾರ

ಇನ್ನು, ಸ್ಮಶಾನಕ್ಕೆ ಸೂಕ್ತ ವ್ಯವಸ್ಥೆ ಇಲ್ಲದ್ದರಿಂದ ಜೋರಾಗಿ ಸುರಿಯುವ ಮಳೆಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಶೀಟ್ ಹಾಕಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಕೊಳ್ಳಲಾಗಿತ್ತು.

ಮನವಿಗೂ ಕ್ಯಾರೆ ಅನ್ನುತ್ತಿಲ್ಲ

ಸ್ಮಶಾನದ ಹಾದಿಗೆ ಮಣ್ಣು ಹಾಕಿ ಎತ್ತರಿಸುವಂತೆ ಹಲವು ಭಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.

ಮಳೆಗಾಲ ಶುರುವಾದರೆ ಈ ಮಾರ್ಗದಲ್ಲಿ ನೀರು ಹರಿಯಲು ಆರಂಭವಾಗುತ್ತದೆ. ಮೂರ್ನಾಲ್ಕು ತಿಂಗಳು ರಸ್ತೆಯಲ್ಲಿ ನೀರು ಹರಿಯುವುದರಿಂದ ಸ್ಮಶಾನಕ್ಕೆ ಹೋಗಲು ಸಾದ್ಯವಾಗುವುದಿಲ್ಲ ಎಂದು ಆರೋಪಿಸುತ್ತಾರೆ.

ಮೃತದೇಹವನ್ನು ನೀರಿನಲ್ಲಿ ಹೊತ್ತು ಸಾಗುವ ದೃಶ್ಯ ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಇದು ಜನಪ್ರಿತಿನಿಧಿಗಳು, ಅಧಿಕಾರಿಗಳಿಗೆ ಎಚ್ಚರಗೊಳ್ಳುವಂತೆ ಮಾಡಿದೆ.

ಇದನ್ನೂ ಓದಿ – ಸ್ವೀಟ್ ಖರೀದಿಸಿ ಹಣ ಕೊಡಲು ವ್ಯಾನಿಟಿ ಬ್ಯಾಗ್ ತೆಗೆದ ಮಹಿಳೆಗೆ ಕಾದಿತ್ತು ಶಾಕ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment