ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

ತೀರ್ಥಹಳ್ಳಿ: ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ (Rajahamsa bus) ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ?

ಮೀನುಗುಂದ ಗ್ರಾಮದ ಪುನೀತ್‌ (26) ಮೃತ ದುರ್ದೈವಿ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ರಾಜಹಂಸ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪುನೀತ್‌ ಮೃತಪಟ್ಟಿದ್ದಾರೆ.

Bike-and-rajahamsa-bus-mishap-near-ranjadakatte-in-shimoga

ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ತನಿಖೆ ನಡೆಯುತ್ತಿದೆ.

utsav-exhibition.webp

Leave a Comment