ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020
ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯಲ್ಲಿ ತುಂಗಾ ನದಿ ಮಧ್ಯೆ ಇರುವ ರಾಮ ಮಂಟಪ ಮುಳುಗಡೆಯಾಗಿದೆ. ಇದನ್ನು ಕಣ್ತುಂಬಿಕೊಳ್ಳಲು ಜನರು ಬರುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಂಡೋಪ ತಂಡವಾಗಿ ಬರ್ತಿದ್ದಾರೆ ಜನ
ರಾಮ ಮಂಟಪ ಮುಳುಗಿರುವ ವಿಚಾರ ತಿಳಿಯುತ್ತಿದ್ದಂತೆ, ಜನರು ತಂಡೋಪ ತಂಡವಾಗಿ, ತುಂಗಾ ನದಿಯತ್ತ ಬರುತ್ತಿದ್ದಾರೆ. ನದಿ ಹರಿಯುವುದನ್ನು ಕಣ್ತುಂಬಿಕೊಳ್ಳಲು, ಫೋಟೊ ಕ್ಲಿಕ್ಕಿಸಿಕೊಳ್ಳಲು ಆಗಮಿಸುತ್ತಿದ್ದಾರೆ.
ಪೊಲೀಸ್ ಬ್ಯಾರಿಕೇಡ್
ಈ ನಡುವೆ ತೀರ್ಥಹಳ್ಳಿ ಪೊಲೀಸರು ತುಂಗಾ ನದಿ ಕಮಾನು ಸೇತುವೆ ಸಮೀಪ ಬ್ಯಾರಿಕೇಡ್ ಹಾಕಿದ್ದಾರೆ. ಮಾಧವ ಮಂಗಲ ಸಭಾ ಭವನದ ಬಳಿಯಲ್ಲೇ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ, ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]