ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಅಕ್ಟೋಬರ್ 2020
ತೀರ್ಥಹಳ್ಳಿಯ ರಂಜದಕಟ್ಟೆ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಶತಮಾನದ ಸೇತುವೆ ಕುಸಿದ ಹಿನ್ನೆಲೆ ರಂಜದಕಟ್ಟೆ ಬಳಿ ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಲಾಗಿತ್ತು. ಆದರೆ ಕಳೆದೆರಡು ದಿನದ ಭಾರಿ ಮಳೆಗೆ ರಂಜದಕಟ್ಟೆ ಸೇತುವೆಯ ಮಣ್ಣು ಕುಸಿದಿದೆ. ಹಾಗಾಗಿ ತೀರ್ಥಹಳ್ಳಿ ಆಗುಂಬೆ ನಡೆವೆ ಸಂಪರ್ಕ ಕಡಿತವಾಗಿದೆ. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿವೆ.
ಸೇತುವೆ ಕುಸಿತದಿಂದ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಸಮಸ್ಯೆಯಾಗಿದೆ. ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧೆಡೆಯಿಂದ ಆಂಬುಲೆನ್ಸ್ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422