ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 27 ಡಿಸೆಂಬರ್ 2019
ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಕಲಚೇತನ ಯುವತಿಯ ಕೈ ಕಾಲು ಕಟ್ಟಿ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅತ್ಯಾಚಾರಕ್ಕೆ ಯತ್ನಿಸಿದವನನ್ನು ಹಿಡಿದು ಗ್ರಾಮಸ್ಥರೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಅತ್ಯಾಚಾರ ಯತ್ನದ ವೇಳೆ ಯುವತಿ ಜೋರಾಗಿ ಕೂಗಿಕೊಂಡಿದ್ದರಿಂದ ಘಟನೆ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಧರ್ಮದೇಟು
ಅತ್ಯಾಚಾರಕ್ಕೆ ಯತ್ನಿಸಿದವನನ್ನು ಸತೀಶ್ (38) ಎಂದು ಗುರುತಿಸಲಾಗಿದೆ. ಈತ ತೀರ್ಥಹಳ್ಳಿ ತಾಲೂಕು ಶಿವರಾಜಪುರದ ನಿವಾಸಿ. ತನ್ನ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಸತೀಶ್ನನ್ನು ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ, ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]