ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020
ಒಂದೆಡೆ ಕರೋನ ಲಾಕ್ಡೌನ್ ಪೆಟ್ಟು, ಮತ್ತೊಂದೆಡೆ ಕುಂಟುತ್ತಿರುವ ಬಿಸ್ನೆಸ್. ಇದರಿಂದ ಸಂಕಷ್ಟಕ್ಕೀಡಾದ ಆಟೋ ಮತ್ತು ಲಗೇಜ್ ಆಟೋ ಚಾಲಕರಿಗೆ ಇಬ್ಬರು ಯುವಕರು ರೇಷನ್ ಕಿಟ್ ಹಂಚಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಬೆಜ್ಜವಳ್ಳಿ, ಮಾಳೂರು, ತೂದೂರು ಭಾಗದ ಚಾಲಕರಿಗೆ ರೇಷನ್ ಕಿಟ್ ಹಂಚಲಾಯಿತು.
ತೀರ್ಥಹಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ ಮತ್ತು ಹುಂಚದಕಟ್ಟೆ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಆದರ್ಶ ಅವರು ಆಟೋ ಚಾಲಕರಿಗೆ ರೇಷನ್ ಕಿಟ್ ಹಂಚಿದರು.
ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಇತ್ತೀಚೆಗೆ ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ನಿರಾಶ್ರಿತರು ಮತ್ತು ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯ ಜನರಿಗೆ ವೈಯಕ್ತಿಕವಾಗಿ ರೇಷನ್ ಕಿಟ್ ಹಂಚಿಕೆ ಮಾಡಿದ್ದರು. ಇದರಿಂದ ಪ್ರೇರಿತರಾಗಿ ಮುಡುಬ ರಾಘವೇಂದ್ರ ಮತ್ತು ಆದರ್ಶ ಹುಂಚದಕಟ್ಟೆ ಅವರು ಆಟೋ ಚಾಲಕರಿಗೆ ಕಿಟ್ ವಿತರಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






