ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ

 ಶಿವಮೊಗ್ಗ  LIVE 

ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕಿ ರೋಗಕ್ಕಾಗಿ (Spot Disease) ಮೀಸಲಿಟ್ಟಿದ್ದ ಬಾಕಿ ಹಣವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 

ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?

2025ರ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಎಲೆಚುಕ್ಕಿ ರೋಗ ಸಂಶೋಧನೆಗೆ ಹಾಗೂ ಪರಿಹಾರಕ್ಕಾಗಿ ₹ 62 ಕೋಟಿ ಘೋಷಿಸಲಾಗಿತ್ತು. ಆದರೆ, ಇದುವರೆಗೂ ಕೇವಲ ₹ 7 ಕೋಟಿ ಬಿಡುಗಡೆಯಾಗಿದ್ದು ಬಾಕಿ ₹55 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದು ಮಲೆನಾಡು ಭಾಗದ ಹೊಸನಗರ, ಸಾಗರ, ಶೃಂಗೇರಿಯ ರೈತರಿಗೆ ಸಹಕಾರಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home-Minister-Araga-Jnanendra-Press-meet-in-Shimoga.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment