ಶಿವಮೊಗ್ಗ: ಮಂಡಗದ್ದೆ ಪಕ್ಷಿಧಾಮದ ಬಳಿ ಹುಂಡೈ ಕಾರು ನಿಯಂತ್ರಣ ತಪ್ಪಿ ಟಾಟಾ ಸಫಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ಕಾರಿಗೆ, ತೀರ್ಥಹಳ್ಳಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಹುಂಡೈ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಹ್ಯುಂಡೈ ಕಾರಿನ ಮುಂಭಾಗ ಜಖಂಗೊಂಡಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಮಾಳೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
