ಹೆದ್ದಾರಿಯಲ್ಲಿ ಹರಿಯುತ್ತಿದೆ ತುಂಗಾ ನದಿ ನೀರು, ಶಿವಮೊಗ್ಗ ತೀರ್ಥಹಳ್ಳಿ ಸಂಚಾರ ವ್ಯತ್ಯಯ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 ಜುಲೈ 2021

ತುಂಗಾ ನದಿ ಉಕ್ಕಿ ಹರಿದು ರಸ್ತೆ, ಗದ್ದೆಗಳು ಜಲಾವೃತವಾಗಿವೆ. ಇದರಿಂದ ಶಿವಮೊಗ್ಗ ತೀರ್ಥಹಳ್ಳಿ ನಡುವೆ ರಸ್ತೆ ಸಂಚಾರ ವ್ಯತ್ಯಯವಾಗಿದೆ.

ತೀರ್ಥಹಳ್ಳಿಯ ತೂದೂರಿನಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಹೊಳೆ ನೀರು ರಸ್ತೆಗೆ ಬಂದಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ನೀರಿನ ರಭಸಕ್ಕೆ ರಸ್ತೆ ಪಕ್ಕದಲ್ಲಿ ನಿಂತಿವೆ. ಹಾಗಾಗಿ ಶಿವಮೊಗ್ಗ ತೀರ್ಥಹಳ್ಳಿ ನಡುವೆ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿದೆ.

ಅಕ್ಕಪಕ್ಕದ ಜಮೀನಿಗೂ ನೀರು ನುಗ್ಗಿದೆ. ನಾಟಿ ಮಾಡಿದ್ದ ಗದ್ದೆಯಲ್ಲಿ ಸಸಿಗಳು ಕೊಚ್ಚಿ ಹೋಗಿರುವ ಸಾಧ್ಯತೆ ಇದೆ. ಇದರಿಂದ ರೈತರಿಗೆ ನಷ್ಟವುಂಟಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 23, 2021 at 7:01 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 23, 2021

Leave a Comment